LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಮುಖಂಡ ಧವನ್ ದೇವ್ ಬಂಧನಕ್ಕೆ ಕೆಪಿಸಿಸಿ ಎಸ್ಸಿ ವಿಭಾಗದ ಅಧ್ಯಕ್ಷ ಆರ್. ಧರ್ಮಸೇನ ಆಗ್ರಹ

ಬೆಂಗಳೂರು: ಗುಜರಾತ್‌ನ ವಡ್ಗಾಮ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಅವರ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ ಮುಖಂಡ ಧವನ್ ದೇವ್‌ನನ್ನು ಕೂಡಲೇ ಬಂಧಿಸಿ, ಗಡಿಪಾರು ಮಾಡಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ (ಎಸ್ಸಿ) ವಿಭಾಗದ ಅಧ್ಯಕ್ಷ ಆರ್. ಧರ್ಮಸೇನ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಪ್ಟೆಂಬರ್ 30 ರಂದು ಇನ್‌ಸ್ಟಾಗ್ರಾಂನಲ್ಲಿ ಬಿಜೆಪಿ ಉಸ್ತುವಾರಿ ಧವನ್ ದೇವ್ ಎಂಬಾತ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಅತ್ಯಂತ ಅವಾಚ್ಯ ಶಬ್ದಗಳನ್ನು ಬಳಸಿ ಪೋಸ್ಟ್ ಮಾಡಿದ್ದಾನೆ. ಜತೆಗೆ ಶಾಸಕರ ತಂಗಿಯ ವಿರುದ್ಧವೂ ಕೀಳುಮಟ್ಟದ ಹಾಗೂ ಅವಹೇಳನಕಾರಿ ಬರಹಗಳನ್ನು ಪ್ರಕಟಿಸಿದ್ದಾನೆ. ಈ ವಿಚಾರದ ವಿರುದ್ಧ ಸ್ವತಃ ಶಾಸಕರೇ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದರೂ ಆರಂಭದಲ್ಲಿ ಪೊಲೀಸರು ದೂರನ್ನು ಸ್ವೀಕರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಸಮುದಾಯಗಳ ನಡುವೆ ತಿಕ್ಕಾಟ ಸೃಷ್ಟಿಸುವ ಹುನ್ನಾರ

ಜಾಲತಾಣಗಳಲ್ಲಿ ಶಾಸಕರ ಕುಟುಂಬದ ಜೊತೆಗೆ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ದ್ವೇಷ ಬಿತ್ತಲಾಗುತ್ತಿದೆ. ಸಮಾಜದಲ್ಲಿ ಶಾಂತಿ ಕದಡಿ ಸಮುದಾಯಗಳ ಮಧ್ಯೆ ಘರ್ಷಣೆ ಉಂಟುಮಾಡುವ ವ್ಯವಸ್ಥಿತ ಹುನ್ನಾರ ಇದರ ಹಿಂದಿದೆ. ಶಾಸಕರ ವಿರುದ್ಧದ ಕೀಳು ಪೋಸ್ಟ್‌ಗಳನ್ನು ಡಿಲೀಟ್ ಮಾಡಿಸುವ ಬದಲು ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಲಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಪ್ರಮುಖ ದಲಿತ ನಾಯಕರಾಗಿ ಬೆಳೆಯುತ್ತಿರುವ ಜಿಗ್ನೇಶ್ ಮೇವಾನಿ ಅವರ ರಾಜಕೀಯ ಪ್ರಗತಿಯನ್ನು ಸಹಿಸದೆ ಇಂತಹ ಷಡ್ಯಂತ್ರ ರೂಪಿಸಲಾಗಿದೆ. ಇಡೀ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆದ ಬಳಿಕವಷ್ಟೇ ಗುಜರಾತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಗೋವಿಂದ ಕಾರಜೋಳ ಹೇಳಿಕೆಗೆ ತಿರುಗೇಟು ಹಾಗೂ ಕಬ್ಬನ್ ಪಾರ್ಕ್ ಠಾಣೆಗೆ ದೂರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ವಿಪಕ್ಷಗಳು ಅವರ ವಿರುದ್ಧ ಮುಗಿಬಿದ್ದಿವೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ನೀಡಿದ್ದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಧರ್ಮಸೇನ, "ಗೋವಿಂದ ಕಾರಜೋಳ ಅವರು ಜಿಗ್ನೇಶ್ ಮೇವಾನಿ ಅವರ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯದ ಬಗ್ಗೆ ಏಕೆ ತುಟಿಬಿಚ್ಚುತ್ತಿಲ್ಲ? ಗುಜರಾತ್‌ನಲ್ಲೇ ದಲಿತ ಸಮುದಾಯದ ಶಾಸಕನಿಗೆ ರಕ್ಷಣೆ ಇಲ್ಲದಂತಾಗಿ ಆತಂಕದ ವಾತಾವರಣ ಸೃಷ್ಟಿಯಾದರೆ ಇನ್ನು ದೇಶದ ಸಾಮಾನ್ಯ ದಲಿತರ ಪರಿಸ್ಥಿತಿ ಏನು?" ಎಂದು ಪ್ರಶ್ನಿಸಿದರು.

ಈ ಕೃತ್ಯವನ್ನು ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆಪಿಸಿಸಿ ಎಸ್ಸಿ ವಿಭಾಗದ ಪದಾಧಿಕಾರಿಗಳ ನಿಯೋಗವು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಈಗಾಗಲೇ ಅಧಿಕೃತ ದೂರು ಸಲ್ಲಿಸಿದೆ ಎಂದು ಅವರು ಮಾಹಿತಿ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!