ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿಸಾಕ್ಷಿಯಾಗಿರುವ ಪ್ರದೋಷ್ ಅವರ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಈ ನಡುವೆ, ನ್ಯಾಯಾಲಯದ ವಿಚಾರಣೆ ವೇಳೆ ತಮ್ಮ ಪರ ವಾದ ಮಂಡಿಸಲು ವಕೀಲರನ್ನು ನೇಮಿಸಿಕೊಳ್ಳಲು ಪ್ರದೋಷ್‌ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ನೀಡಿದೆ. ತಂದೆಯ ಮೊದಲ ವರ್ಷದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮತ್ತು ಅದಕ್ಕಾಗಿ ಅನುಮತಿ ಕೋರಿ ಅರ್ಜಿ ಸಲ್ಲಿಸಲು ವಕೀಲರನ್ನು ನೇಮಿಸಿಕೊಳ್ಳುವುದಾಗಿ ಪ್ರದೋಷ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ಕ್ರಾಸ್ ಎಗ್ಸಾಮಿನೇಷನ್ (ಪಟೀಸವಾಲು) ಪ್ರಕ್ರಿಯೆ ಆರಂಭವಾಗುವವರೆಗೆ ವಿಡಿಯೋ ಕಾನ್ಫರೆನ್ಸ್ (VC) ಮೂಲಕವೇ ನ್ಯಾಯಾಲಯಕ್ಕೆ ಹಾಜರಾಗುವಂತೆ ಪ್ರದೋಷ್‌ಗೆ ಸೂಚನೆ ನೀಡಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಪ್ರಮುಖ ಹಂತವೊಂದು ಪೂರ್ಣಗೊಂಡಂತಾಗಿದೆ.