LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಂಡ-ಹೆಂಡತಿ ನಡುವೆ ಜಗಳ: ಕೋಪದ ಬರದಲ್ಲಿ ಚರಂಡಿಗೆ ಹಾರಿದ ವ್ಯಕ್ತಿ ನಾಪತ್ತೆ

ನೊಯ್ಡಾ: ಪತಿಯ ಕುಡಿತದ ವಿಚಾರವಾಗಿ ಗಂಡ-ಹೆಂಡತಿ ನಡುವ್ರೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದ್ದು, ಕೋಪದ ಬರದಲ್ಲಿ ಪತಿ ಮಹಾಶಯ ಚರಂಡಿಗೆ ಹಾರಿರುವ ಘಟನೆ ನೊಯ್ಡಾದಲ್ಲಿ ನಡೆದಿದೆ.

ಹೆಂಡತಿಯೊಂದಿಗೆ ಮದ್ಯಪಾನದ ವಿಚಾರಕ್ಕೆ ಜಗಳವಾಡಿದ 29 ವರ್ಷದ ವ್ಯಕ್ತಿ ಕೋಪದಲ್ಲಿ ನೋಯ್ಡಾದ ಸೆಕ್ಟರ್-81 ಮೆಟ್ರೋ ನಿಲ್ದಾಣದ ಬಳಿಯಿರುವ ಬೃಹತ್ ಚರಂಡಿಗೆ ಹಾರಿದ್ದಾನೆ. ಸೆಕ್ಟರ್ 39 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಿಂದ ಸ್ಥಳದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಾಪತ್ತೆಯಾದ ವ್ಯಕ್ತಿಯನ್ನು ರವಿ ಎಂದು ಗುರುತಿಸಲಾಗಿದೆ. ಆತನ ಪತ್ನಿ ಪೊಲೀಸರಿಗೆ ನೀಡಿರುವ ಹೇಳಿಕೆಯ ಪ್ರಕಾರ, ರವಿ ವಿಪರೀತ ಕುಡಿತದ ಚಟಕ್ಕೆ ದಾಸನಾಗಿದ್ದ. ಇದೇ ಕಾರಣಕ್ಕೆ ಇಬ್ಬರ ನಡುವೆ ರಸ್ತೆಯಲ್ಲೇ ತೀವ್ರ ವಾಗ್ವಾದ ನಡೆದಿತ್ತು. ಗಲಾಟೆಯ ನಡುವೆ ಕೋಪದ ಭರದಲ್ಲಿ ರವಿ ಏಕಾಏಕಿ ರಸ್ತೆಬದಿಯ ಚರಂಡಿಗೆ ಹಾರಿದ್ದಾನೆ.

ಸ್ಥಳೀಯರು ತುರ್ತು ಸಹಾಯವಾಣಿ ‘ಡಯಲ್-112’ಗೆ ಮಾಹಿತಿ ನೀಡಿದ ತಕ್ಷಣವೇ ಸೆಕ್ಟರ್ 39 ಠಾಣಾ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿತು. ಮಳೆಯಿಂದಾಗಿ ಚರಂಡಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದು ಮತ್ತು ಅಪಾರ ಪ್ರಮಾಣದ ಘನತ್ಯಾಜ್ಯ ಹಾಗೂ ಹೂಳು ತುಂಬಿಕೊಂಡಿರುವುದರಿಂದ ಅಗ್ನಿಶಾಮಕ ಸಿಬ್ಬಂದಿಗೆ ಆತನನ್ನು ಪತ್ತೆಹಚ್ಚುವುದು ಸವಾಲಾಗಿ ಪರಿಣಮಿಸಿತು.

ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಸ್ಥಳೀಯ ಆಡಳಿತವು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳನ್ನು ಕಾರ್ಯಾಚರಣೆಗೆ ಇಳಿಸಿದೆ. ಬೋಟ್‌ಗಳು ಮತ್ತು ಜಾಲರಿಗಳನ್ನು ಬಳಸಿ ಶೋಧ ಮುಂದುವರಿಸಲಾಗಿದೆ. ಈವರೆಗೂ ರವಿ ಪತ್ತೆಯಾಗಿಲ್ಲ.

ಕುಡಿದ ಮತ್ತಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಾರು: ಬೆಂಕಿಯಲ್ಲಿ ಹೊತ್ತಿ ಉರಿ ಬಂಕ್

ಆನೇಕಲ್: ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ಐಷಾರಾಮಿ ಜಾಗ್ವಾರ್ ಕಾರನ್ನು ನೇರವಾಗಿ ಪೆಟ್ರೋಲ್ ಬಂಕ್‌ಗೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಕಾರು ಹಾಗೂ ಪೆಟ್ರೋಲ್ ಬಂಕ್ ಎರಡಕ್ಕೂ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ನಡೆದಿದೆ. ಚಾಲಕ ಕಂಠಪೂರ್ತಿ ಕುಡಿದು ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಯುವತಿಯೊಂದಿಗೆ ಕಾರಿನಲ್ಲಿ ಬಂದಿದ್ದ ಸಂಜಯ್ ಎಂಬಾತ, ಮೊದಲು ಪೆಟ್ರೋಲ್ ಬಂಕ್‌ನ ಸಿಬ್ಬಂದಿ ಗುಡ್ಡು ಕುಮಾರ್ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಪೆಟ್ರೋಲ್ ಬಂಕ್ ಗೆ ಕಾರು ಅಪ್ಪಳಿಸಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಯುವಕ ಮತ್ತು ಯುವತಿ ಇಬ್ಬರೂ ಹೊರ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಬ್ಬಂದಿ ಗುಡ್ಡು ಕುಮಾರ್ ಅವರಿಗೆ ಕಾಲಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಪೊಲೀಸರು, ಕಾರು ಚಾಲಕ ಸಂಜಯ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆ ಉದ್ದೇಶಪೂರ್ವಕವೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಯಶಸ್ವಿಯಾಗಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?