LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಮಕ್ಕಳಿಗೆ ಗುಡ್‌ನ್ಯೂಸ್: ಇನ್ಮುಂದೆ ಉಚಿತ ಕಲಾ ಶಿಕ್ಷಣ; ಎನ್‌ಜಿಎಂಎ–ಆರ್‌ಡಿಪಿಆರ್ ಒಪ್ಪಂದ

ಬೆಂಗಳೂರು-: ಗ್ರಾಮೀಣ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಲು ಹಾಗೂ ಕಲಾ ರಂಗದಲ್ಲಿ ಔನ್ನತ್ಯ ಸಾಧಿಸಲು ಅನುವಾಗುವಂತೆ ಗ್ರಾಮ ಪಂಚಾಯತಿಗಳ ಗಂಥಾಲಯಗಳಲ್ಲಿ ಉಚಿತವಾಗಿ ಆಧುನಿಕ ಕಲಾ ಶಿಕ್ಷಣ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಬೆಂಗಳೂರಿನ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿ (ಎನ್.ಜಿ.ಎಂ.ಎ) ನಡುವೆ ನಡೆದ ಒಡಂಬಡಿಕೆ ವಿನಿಮಯಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಗ್ರಂಥಾಲಯ – ಅರಿವು ಕೇಂದ್ರಕ್ಕೆ ಬರುವ ಮಕ್ಕಳಿಗೆ ಆಧುನಿಕ ಕಲೆಯ ಪರಿಚಯ ಮಾಡಿಸಲಾಗುವುದು ಎಂದರು.

ಒಡಂಬಡಿಕೆಯನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಕ್ರಮದ ಪ್ರಸಾರ ಮತ್ತು ಅನುಷ್ಠಾನಕ್ಕೆ ಅನುಕೂಲ ಕಲ್ಪಿಸಲಿದೆ. ಎನ್.ಜಿ.ಎಂ.ಎ. ಕಲಾ ಶಿಕ್ಷಣದ ಮಾದರಿಗಳು ಹಾಗೂ ಸಂಪನ್ಮೂಲ ಅಭಿವೃದ್ಧಿ ಪಡಿಸಲಿದೆ. ಶೈಕ್ಷಣಿಕ ಉದ್ದೇಶಕ್ಕಾಗಿ ತನ್ನ ಶಾಶ್ವತ ಸಂಗ್ರಹಾಲಯದಲ್ಲಿರುವ ಆಯ್ದ ಡಿಜಿಟಲ್ ಕಲಾಕೃತಿಗಳನ್ನು ಒದಗಿಸಲಿದೆ. ಜೊತೆಗೆ ಗ್ರಂಥಪಾಲಕರಿಗೆ ಮತ್ತು ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿಯನ್ನು ನೀಡಲಿದೆ. ಇವರು ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಆಧುನಿಕ ಕಲಾ ಶಿಕ್ಷಣ ನೀಡುತ್ತಾರೆ ಎಂದರು.

ಕಲಾ ಶಿಕ್ಷಣದ ಶಾಖೆಗಳು

ಇಂಡಿಯಾ ಫೌಂಡೇಷನ್ ಫಾರ್ ಆರ್ಟ್ಸ್ (ಐ.ಎಫ್.ಎ) ಆಧುನಿಕ ಕಲಾ ಶಿಕ್ಷಣ ಕಲಿಕೆಗೆ ಅಗತ್ಯವಾದ ಪಠ್ಯಕ್ರಮ ಅಭಿವೃದ್ಧಿ ಪಡಿಸುತ್ತದೆ ಮತ್ತು ಸಾಮರ್ಥ್ಯವರ್ಧನೆ ಹಾಗೂ ಕಾರ್ಯಕ್ರಮದ ಅನುಷ್ಠಾನಕ್ಕೆ ಬೆಂಬಲ ನೀಡಲಿದೆ. ರಿ ರಿತಿ ಸಂಸ್ಥೆ ಸ್ವತಂತ್ರ ಮೌಲ್ಯಮಾಪನ ಮತ್ತು ಮೇಲ್ವಿಚಾರಣೆಯನ್ನು ಕೈಗೊಳ್ಳಲಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಕಾರ್ಯದರ್ಶಿ ಡಿ.ರಂದೀಪ್, ಆಯುಕ್ತರಾದ ವೈ.ಎಸ್. ಪಾಟೀಲ್, ಎಂ.ಜಿ.ಎಂ.ಎ. ನಿರ್ದೇಶಕರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ