LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಡಹಗಲೇ ಗೆಳತಿಗೆ ಗುಂಡಿಕ್ಕಿದ ವಿವಾಹಿತ ; ಬಳಿಕ ತಾನೂ ಸಾವಿಗೆ ಶರಣು !

ಉತ್ತರ ಪ್ರದೇಶದ ಆಗ್ರಾದಲ್ಲಿ ಬುಧವಾರ ಮಧ್ಯಾಹ್ನ ಸಾರ್ವಜನಿಕವಾಗಿ ಅತ್ಯಂತ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. 25 ವರ್ಷದ ವಿವಾಹಿತ ಯುವಕನೊಬ್ಬ ತನ್ನ ಪ್ರೇಮಿಯ ಮೇಲೆ ಸಾರ್ವಜನಿಕ ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ಬಳಿಕ ಜನರು ಸುತ್ತವರಿಯುತ್ತಿದ್ದಂತೆ ತಾನೂ ಅದೇ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘಟನೆ ಮಾಲಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಫೈರ್ ಕಾಲೋನಿಯಲ್ಲಿ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ನಡೆದಿದೆ. ಹತ್ರಾಸ್ ಮೂಲದ ಹಾಗೂ ಆಗ್ರಾದಲ್ಲಿ ಬಾಡಿಗೆ ಕೊಠಡಿಯಲ್ಲಿದ್ದುಕೊಂಡು ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಹನಿ ಎಂಬ ಯುವತಿ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಸೈಯಾ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಈತನಿಗೆ ಈಗಾಗಲೇ ಮದುವೆಯಾಗಿದ್ದು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರದಂದು ಹನಿ ತನ್ನ ಸ್ನೇಹಿತೆಯೊಂದಿಗೆ ಅರುಣ್ ಕುಮಾರ್‌ನನ್ನು ಭೇಟಿಯಾಗಲು ಸಫೈರ್ ಕಾಲೋನಿಗೆ ಬಂದಿದ್ದರು. ಈ ವೇಳೆ ಇಬ್ಬರ ನಡುವೆ ಸಾರ್ವಜನಿಕ ರಸ್ತೆಯಲ್ಲೇ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಅರುಣ್ ತನ್ನ ಪಿಸ್ತೂಲ್ ತೆಗೆದು ಹನಿ ಕಡೆಗೆ ಗುಂಡು ಹಾರಿಸಿದ್ದಾನೆ. ಗುಂಡು ತಗಲಿ ಯುವತಿ ರಕ್ತದ ಮಡುವಿನಲ್ಲಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದು, ಭಯಗೊಂಡ ಆಕೆಯ ಸ್ನೇಹಿತೆ ಸ್ಥಳದಿಂದ ಓಡಿಹೋಗಿದ್ದಾಳೆ.

ಗುಂಡಿನ ಸದ್ದು ಕೇಳಿ ಸುತ್ತಮುತ್ತಲಿನ ನಿವಾಸಿಗಳು ರಸ್ತೆಗೆ ಧಾವಿಸಿ ಬಂದಿದ್ದಾರೆ. ಜನರು ತನ್ನನ್ನು ಸುತ್ತವರಿಯುತ್ತಿರುವುದನ್ನು ಮತ್ತು ಪೊಲೀಸರಿಗೆ ಸಿಕ್ಕಿಬೀಳುವ ಭಯದಲ್ಲಿದ್ದ ಅರುಣ್, ತಕ್ಷಣವೇ ಅದೇ ಪಿಸ್ತೂಲನ್ನು ತನ್ನ ಹಣೆಗೆ ಇಟ್ಟುಕೊಂಡು ಗುಂಡು ಹಾರಿಸಿಕೊಂಡಿದ್ದಾನೆ. ತೀವ್ರ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಆಗ್ರಾ ಪೊಲೀಸರಿಗೆ ಮುಖ್ಯವಾದ ಮಾಹಿತಿ ಲಭಿಸಿದೆ. ಇಬ್ಬರ ನಡುವೆ ಸುಮಾರು 1.5 ತಿಂಗಳ ಹಿಂದೆ ಬ್ರೇಕಪ್ ಆಗಿತ್ತು ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ, ಈ ಹಿಂದೆ ಹನಿ ಅರುಣ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣದ ದೂರು ನೀಡಿದ್ದರು. ಆದರೆ ನಂತರ ಕೋರ್ಟ್‌ನಲ್ಲಿ ಹೇಳಿಕೆ ನೀಡಿ ದೂರನ್ನು ವಾಪಸ್ ಪಡೆದಿದ್ದರು. ಈ ಹಳೆಯ ವ್ಯಾಜ್ಯ, ಬ್ರೇಕಪ್ ಹಾಗೂ ಬುಧವಾರ ನಡೆದ ಜಗಳಕ್ಕೆ ಇರುವ ಲಿಂಕ್ ಏನು ಎಂಬುದನ್ನು ತಿಳಿಯಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ