LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ವಿರುದ್ಧ ರಣಕಹಳೆ: ಧ್ರುವ್ ರಾಠಿ-ಪ್ರಕಾಶ್ ರಾಜ್ ಜಂಟಿ ಹೋರಾಟ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು. 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ನಟ-ಕಾರ್ಯಕರ್ತ ಪ್ರಕಾಶ್ ರಾಜ್ ಹಾಗೂ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಭಾಗವಹಿಸಿ ಸಾಥ್ ನೀಡಿದರು.

ಪ್ರತಿಭಟನಾ ಸ್ಥಳದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು 'ಎಸ್‌ಐಆರ್ ರದ್ದು ಮಾಡಿ', 'ಜ್ಞಾನೇಶ್ ಕುಮಾರ್ ಗದ್ದುಗೆ ಬಿಡಿ' ಹಾಗೂ 'ವೋಟ್ ಚೋರ್' ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದರು. ಸಿಜೆಪಿ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು 'ಜನತಾ ನ್ಯಾಯಮಂಡಳಿ' (ಪೀಪಲ್ಸ್ ಟ್ರಿಬ್ಯೂನಲ್) ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ಮುಂದುವರಿದ ಭಾಗವಾಗಿ 'ಚಪ್ಪಲಿ ಚಳವಳಿ' ನಡೆಸಲು ಸಂಘಟಕರು ತೀರ್ಮಾನಿಸಿದ್ದಾರೆ.

ಗುರುವಾರ ಬೆಳಿಗ್ಗೆಯಿಂದಲೇ ವಿವಿಧ ನಾಗರಿಕ ಸಮಾಜ ಸಂಘಟನೆಗಳು ಹಾಗೂ ಕಾರ್ಯಕರ್ತರು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸತೊಡಗಿದರು. ಮಧ್ಯಾಹ್ನ ಸುಮಾರು 1 ಗಂಟೆಗೆ ಸಿಜೆಪಿ ಮುಖಂಡರಾದ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರೊಂದಿಗೆ ಪ್ರಕಾಶ್ ರಾಜ್ ಹಾಗೂ ಧ್ರುವ್ ರಾಠಿ ವೇದಿಕೆಗೆ ಆಗಮಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ನಟ ಪ್ರಕಾಶ್ ರಾಜ್, ಚುನಾವಣಾ ಆಯೋಗವು ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಇಡೀ ದೇಶಕ್ಕೆ ಅವಮಾನ ಮಾಡಿದೆ ಎಂದು ಕಿಡಿಕಾರಿದರು. "ಈ ಹಿಂದೆ ದೇಶದಲ್ಲಿ ಯಾರು ಸರ್ಕಾರ ರಚಿಸಬೇಕು ಎಂಬುದನ್ನು ಜನ ನಿರ್ಧರಿಸುತ್ತಿದ್ದರು. ಆದರೆ ಈಗ ಜಾರಿಯಾಗಿರುವ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಯಾರು ಮತ ಚಲಾಯಿಸಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸುವಂತಾಗಿದೆ," ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

20 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13 ಕೋಟಿಗೂ ಅಧಿಕ ಜನರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗಲು ಈ ಎಸ್‌ಐಆರ್ ಕಾರಣವಾಗಿದೆ ಎಂದು ಆರೋಪಿಸಿದ ಅವರು, ನಾಗರಿಕರ ಹಕ್ಕುಗಳನ್ನು ಮರಳಿ ಪಡೆಯುವುದೇ ಈ ಹೋರಾಟದ ಮುಖ್ಯ ಉದ್ದೇಶ ಎಂದರು. ಕೇವಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ನಮ್ಮ ಗುರಿಯಲ್ಲ, ಒಬ್ಬರು ಹೋದರೆ ಮತ್ತೊಬ್ಬರು ಆ ಸ್ಥಾನಕ್ಕೆ ಬರುತ್ತಾರೆ. ಬದಲಿಗೆ ಇಡೀ ಎಸ್‌ಐಆರ್ ಪ್ರಕ್ರಿಯೆಯನ್ನೇ ರದ್ದುಗೊಳಿಸಬೇಕೆಂದು ಅವರು ಆಗ್ರಹಿಸಿದರು.

ಮತದಾರರ ಪಟ್ಟಿಯಿಂದ ಹೆಸರುಗಳ ಅಳಿಸುವಿಕೆ ಮತ್ತು ಮರುಸೇರ್ಪಡೆ ಕುರಿತಂತೆ ಸ್ವತಃ ಚುನಾವಣಾ ಆಯೋಗದ ಒಳಗಡೆಯೇ ಆಕ್ಷೇಪಗಳು ವ್ಯಕ್ತವಾಗಿವೆ ಎಂಬ ಪತ್ರಿಕಾ ವರದಿಗಳ ಬೆನ್ನಲ್ಲೇ ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 10 ತಿಂಗಳಲ್ಲಿ ಎಸ್‌ಐಆರ್ ಸಂಬಂಧಿತ ವಿವಿಧ ನಿರ್ಧಾರಗಳ ಬಗ್ಗೆ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕನಿಷ್ಠ 14 ಬಾರಿ ಆಕ್ಷೇಪ ಎತ್ತಿದ್ದರು ಎಂಬ ಮಾಹಿತಿ ಹೊರಬಿದ್ದ ನಂತರ, ವಿರೋಧ ಪಕ್ಷಗಳು ಹಾಗೂ ಸಂಘಟನೆಗಳು ಆಯೋಗದ ವಿರುದ್ಧ ತಮ್ಮ ಹೋರಾಟವನ್ನು ಚುರುಕುಗೊಳಿಸಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!