LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮದ್ದೂರು ‘ಕೈ’ ಪಾಳಯದಲ್ಲಿ ಭಿನ್ನಮತ ಸ್ಫೋಟ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿ.ಚಲುವರಾಜು ದಿಢೀರ್ ರಾಜೀನಾಮೆ!

ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನ ತಾರಕಕ್ಕೇರಿದ್ದು, ಮದ್ದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ. ಚಲುವರಾಜು ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ತೈಲೂರು ಗ್ರಾಮದ ನಿವಾಸಿಯಾಗಿರುವ ಚಲುವರಾಜು ಅವರು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷ ಕುಮಾರ್ ಕೊಪ್ಪ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ರವಾನಿಸಿದ್ದು, ಇದು ಮಂಡ್ಯ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಮೇಲ್ನೋಟಕ್ಕೆ ವೈಯಕ್ತಿಕ ಕಾರಣ, ಒಳಗೆ ಶಾಸಕರ ಆಪ್ತರ ವಿರುದ್ಧ ಆಕ್ರೋಶ?

ತಮ್ಮ ರಾಜೀನಾಮೆ ಪತ್ರದಲ್ಲಿ ವೈಯಕ್ತಿಕ ಕಾರಣಗಳನ್ನು ಮುಂದಿಟ್ಟಿರುವ ಚಲುವರಾಜು, "ಕ್ಷೇತ್ರದ ಶಾಸಕರಾದ ಕೆ.ಎಂ. ಉದಯ್ ಅವರು ನನ್ನ ಪಕ್ಷನಿಷ್ಠೆ ಹಾಗೂ ಸಂಘಟನಾ ಶಕ್ತಿಯನ್ನು ಗುರುತಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸಹಕರಿಸಿದ್ದರು. ಕಳೆದ ಎರಡು ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದೇನೆ. ಆದರೆ, ಇತ್ತೀಚೆಗೆ ನನ್ನ ಸ್ವಂತ ವ್ಯಾಪಾರ-ವ್ಯವಹಾರಗಳಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗದ ಕಾರಣ ಈ ಹುದ್ದೆ ತ್ಯಜಿಸುತ್ತಿದ್ದೇನೆ" ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ, ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ಕ್ಷೇತ್ರದಲ್ಲಿ ಶಾಸಕರ ಆಪ್ತರ ಹಾವಳಿ ಮತ್ತು ಏಕಪಕ್ಷೀಯ ಆಡಳಿತ ಶೈಲಿಯಿಂದ ಮೂಲ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಬೇಸತ್ತಿದ್ದಾರೆ. ದಶಕಗಳಿಂದ ಪಕ್ಷದ ಬಾವುಟ ಹಿಡಿದು ಕಷ್ಟಕಾಲದಲ್ಲಿ ದುಡಿದ ನಿಷ್ಠಾವಂತರನ್ನು ಕಡೆಗಣಿಸಿ, ಹೊಸದಾಗಿ ಬಂದಿರುವ ಆಪ್ತ ವಲಯವೇ ಪಕ್ಷದ ಆಂತರಿಕ ತೀರ್ಮಾನಗಳಲ್ಲಿ ಪ್ರಾಬಲ್ಯ ಮೆರೆಯುತ್ತಿದೆ ಎಂಬ ಅಸಮಾಧಾನವೇ ಈ ರಾಜೀನಾಮೆಯ ಹಿಂದಿನ ಅಸಲಿ ಕಾರಣ ಎನ್ನಲಾಗಿದೆ.

ರಾಜೀನಾಮೆ ತಿರಸ್ಕರಿಸಿದ ಜಿಲ್ಲಾಧ್ಯಕ್ಷ ಕುಮಾರ್ ಕೊಪ್ಪ

ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಡಿಸಿಸಿ ಅಧ್ಯಕ್ಷ ಕುಮಾರ್ ಕೊಪ್ಪ, ಚಲುವರಾಜು ಅವರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದು ಖಡಾಕ್ ಆಗಿ ಹೇಳಿದ್ದಾರೆ. "ಚಲುವರಾಜು ಅವರು ಖುದ್ದಾಗಿ ಭೇಟಿ ಮಾಡಿ ಪತ್ರ ಸಲ್ಲಿಸಿರುವುದು ನಿಜ. ಐದು ವರ್ಷ ಅಧಿಕಾರಾವಧಿ ಪೂರೈಸಿದ ಅಧ್ಯಕ್ಷರನ್ನು ಬದಲಿಸಲು ಕೆಪಿಸಿಸಿ ಮಾರ್ಗಸೂಚಿ ಹೊರಡಿಸಿದೆ. ಆದರೆ, ಚಲುವರಾಜು ಅವರು ಕೇವಲ 2 ವರ್ಷ ಪೂರೈಸಿದ್ದಾರೆ. ಅವರ ಸಂಘಟನಾ ಚಾತುರ್ಯ ಹಾಗೂ ಹೋರಾಟದ ಗುಣವನ್ನು ಪರಿಗಣಿಸಿ ಅವರನ್ನೇ ಮುಂದುವರಿಸಬೇಕೆಂದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒಕ್ಕೊರಲಿನಿಂದ ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ರಾಜೀನಾಮೆಯನ್ನು ಸಾರಾಸಗಟಾಗಿ ತಿರಸ್ಕರಿಸಲಾಗುವುದು" ಎಂದು ತಿಳಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಸಿದ್ಧತೆಯ ಹೊತ್ತಿನಲ್ಲೇ ಬ್ಲಾಕ್ ಅಧ್ಯಕ್ಷರ ಈ ಅಸಮಾಧಾನ ಹಾಗೂ ರಾಜೀನಾಮೆ ಪ್ರಹಸನವು ಮದ್ದೂರು ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ್ದು, ನಾಯಕರು ಭಿನ್ನಮತ ಶಮನಗೊಳಿಸಲು ಯಾವ ತಂತ್ರ ರೂಪಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ವರದಿ: ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ