LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ವಾಯುಪಡೆ ಈಗ ಅಸಾಧಾರಣ, ಬಹು-ಡೊಮೇನ್ ಪಡೆಯಾಗಿ ಬೆಳೆದಿದ್ದು, ಯಾವುದೇ ಸವಾಲು ಎದುರಿಸಲು ಸಿದ್ಧವಾಗಿದೆ: ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್

ಘಾಜಿಯಾಬಾದ್‌: ಭಾರತೀಯ ವಾಯುಪಡೆ ಈಗ ಅಸಾಧಾರಣ ಶಕ್ತಿ ಹೊಂದಿದ್ದು, ಬಹು-ಡೊಮೇನ್ ಪಡೆಯಾಗಿ ಬೆಳೆದಿದೆ. ಯಾವುದೇ ಸವಾಲು ಎದುರಿಸಲು ಸಿದ್ಧವಾಗಿದೆ ಎಂದು ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್ ತಿಳಿಸಿದ್ದಾರೆ.

ಘಾಜಿಯಾಬಾದ್‌ನ ಹಿಂಡನ್ ವಾಯುನೆಲೆಯಲ್ಲಿ ನಡೆದ 94ನೇ ವಾಯುಪಡೆ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದ ಭದ್ರತೆಗೆ ಎದುರಾಗುವ ಯಾವುದೇ ಸವಾಲನ್ನು ಎದುರಿಸಲು ಐಎಎಫ್​ ಸಿದ್ಧವಾಗಿದೆ ಎಂದು ಹೇಳಿದರು. ದೇಶದ ಸಾರ್ವಭೌಮತ್ವ ಮತ್ತು ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ವಾಯುಶಕ್ತಿಯೇ ಪ್ರಾಥಮಿಕ ಅಸ್ತ್ರವಾಗಿದೆ ಎಂಬುದನ್ನು ಪ್ರಸ್ತುತ ಜಾಗತಿಕ ಸಂಘರ್ಷಗಳು ಸಾಬೀತುಪಡಿಸಿವೆ ಎಂದರು. ಇದೇ ವೇಳೆ ಕರ್ತವ್ಯದ ಹಾದಿಯಲ್ಲಿ ಪ್ರಾಣಾರ್ಪಣೆ ಮಾಡಿದ ವಾಯು ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಕಳೆದ 94 ವರ್ಷಗಳಲ್ಲಿ ಭಾರತೀಯ ವಾಯುಪಡೆ ತನ್ನ ಕಾರ್ಯಾಚರಣಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದೆ. ಜಗತ್ತಿನ ವಿವಿಧ ಸಂಘರ್ಷಗಳು ದೇಶದ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಾಯುಶಕ್ತಿಯ ಮಹತ್ವವನ್ನು ಮತ್ತೊಮ್ಮೆ ತೋರಿಸಿವೆ ಎಂದು ಹೇಳಿದರು.

ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಐಎಎಫ್​ ತನ್ನ ಕಾರ್ಯಾಚರಣೆಯ ವೇಗ ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸಿದೆ ಎಂದುಉಲ್ಲೇಖಿಸಿದರು. ಐಎಎಫ್​ನ ನೆಟ್‌ವರ್ಕ್ ಆಧಾರಿತ ಕಮಾಂಡ್ ಮತ್ತು ಕಂಟ್ರೋಲ್ ವ್ಯವಸ್ಥೆಗಳು ಆಧುನಿಕ ಯುದ್ಧ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಐಎಎಫ್ ದೇಶದ ನಿರೀಕ್ಷೆಗಳನ್ನು ತಲುಪುವುದು ಮಾತ್ರವಲ್ಲ, ಅವುಗಳನ್ನು ಮೀರಿ ಮುನ್ನಡೆಯಲಿದೆ. ದೇಶದ ಮೇಲೆ ಎದುರಾಗುವ ಯಾವುದೇ ಸವಾಲನ್ನು ಹಿಮ್ಮೆಟ್ಟಿಸಲು ಸದಾ ಜಾಗರೂಕವಾಗಿದೆ ಎಂದರು.

ಅಕ್ಟೋಬರ್‌ 31ರಂದು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ಮಾತನಾಡಿದ ಏರ್‌ ಚೀಫ್‌ ಮಾರ್ಷಲ್‌ ಸಿಂಗ್‌, ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುವುದು ತಮ್ಮ ಪಾಲಿನ ಅತ್ಯಂತ ದೊಡ್ಡ ಭಾಗ್ಯ ಮತ್ತು ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ವಾಯುಪಡೆ ಮುಖ್ಯಸ್ಥರು 1960ರ ದಶಕದ ವಿಂಟೇಜ್ ಕಾರಿನಲ್ಲಿ ಸಮಾರಂಭದ ಸ್ಥಳಕ್ಕೆ ಆಗಮಿಸಿದ್ದು, ಆಕಾಶದಲ್ಲಿ ಮೂರು ಹೆಲಿಕಾಪ್ಟರ್‌ಗಳು ‘ಧ್ವಜ’ ರಚನೆಯಲ್ಲಿ ಹಾರಾಟ ನಡೆಸಿ ಗೌರವ ವಂದನೆ ಸಲ್ಲಿಸಿದವು.

ರಫೇಲ್, ಸುಖೋಯ್ ಸು-30 ಎಂಕೆಐ ಮತ್ತು ಜಾಗ್ವಾರ್ ಯುದ್ಧ ವಿಮಾನಗಳು ಟಾರ್ಮ್ಯಾಕ್‌ನಲ್ಲಿ ಗಮನ ಸೆಳೆದವು. ಲಘು ಯುದ್ಧ ಹೆಲಿಕಾಪ್ಟರ್ ‘ಎಲ್‌ಸಿಎಚ್ ಪ್ರಚಂಡ್’ , ‘ಎಎಲ್‌ಎಚ್ ಧ್ರುವ್’ ಹೆಲಿಕಾಪ್ಟರ್‌ಗಳು ಹಾಗೂ ಸುಧಾರಿತ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳು ಸ್ಥಿರ ಪ್ರದರ್ಶನದಲ್ಲಿ ಅನಾವರಣಗೊಂಡವು. ಈ ಕಾರ್ಯಕ್ರಮದಲ್ಲಿ ಮೂರೂ ಸೇನೆಗಳ ಮುಖ್ಯಸ್ಥರು, ಹಿರಿಯ ಸೇನಾಧಿಕಾರಿಗಳು ಮತ್ತು ನಿವೃತ್ತ ಏರ್ ಚೀಫ್ ಮಾರ್ಷಲ್‌ಗಳು ಭಾಗವಹಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!