LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದ್ದು, ಪ್ರಕರಣದ ಪ್ರಮುಖ ಸಾಕ್ಷಿಗಳಾಗಿರುವ ಸ್ಯಾಂಡಲ್‌ವುಡ್ ನಟ ಚಿಕ್ಕಣ್ಣ ಹಾಗೂ ನಟ ಯಶಸ್ ಸೂರ್ಯ ಅವರಿಗೆ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಅಧಿಕೃತ ಸಮನ್ಸ್ ಜಾರಿ ಮಾಡಿದೆ.

ಕೊಲೆ ಕೃತ್ಯ ನಡೆಯುವುದಕ್ಕೂ ಮುನ್ನ ಆರೋಪಿ ನಟ ದರ್ಶನ್ ಜತೆ ಬೆಂಗಳೂರಿನ ಆರ್.ಆರ್. ನಗರದ 'ಸ್ಟೋನಿ ಬ್ರೂಕ್' ಪಬ್‌ನಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಇಬ್ಬರೂ ನಟರು ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಚಿಕ್ಕಣ್ಣ ಅವರನ್ನು ಸಿಡಬ್ಲ್ಯೂ-80 (CW-80) ಹಾಗೂ ಯಶಸ್ ಸೂರ್ಯ ಅವರನ್ನು ಸಿಡಬ್ಲ್ಯೂ-98 (CW-98) ಸಾಕ್ಷಿದಾರರನ್ನಾಗಿ ಹೆಸರಿಸಲಾಗಿತ್ತು.

ಅಕ್ಟೋಬರ್ 13 ರಂದು ವಿಚಾರಣೆಗೆ ಹಾಜರಾಗಲು ಆದೇಶ

ಘಟನೆ ನಡೆದ ದಿನದ ಪಾರ್ಟಿ, ದರ್ಶನ್ ಅವರ ಉಪಸ್ಥಿತಿ ಹಾಗೂ ಅಲ್ಲಿ ನಡೆದ ಬೆಳವಣಿಗೆಗಳ ಕುರಿತು ನ್ಯಾಯಾಲಯದಲ್ಲಿ ಅಧಿಕೃತ ಸಾಕ್ಷ್ಯ ನುಡಿಯುವಂತೆ ಸೂಚಿಸಿರುವ 59ನೇ ಸಿಸಿಎಚ್ ನ್ಯಾಯಾಲಯ, ಇದೇ ಅಕ್ಟೋಬರ್ 13 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ಇಬ್ಬರೂ ನಟರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ನ್ಯಾಯಾಲಯದ ಈ ಸಮನ್ಸ್‌ನಿಂದಾಗಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣಾ ಪ್ರಕ್ರಿಯೆ ಮತ್ತೊಂದು ಮಹತ್ವದ ಘಟ್ಟ ತಲುಪಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?