LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೂಡಾ ನೂತನ ಅಧ್ಯಕ್ಷ ಮಧುಸೂದನ್ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ:, ಪಕ್ಷ ಸಂಘಟನೆಗೆ ಕರೆ

ಬೆಂಗಳೂರು : ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾದ ಸಿ.ಜಿ. ಮಧುಸೂದನ್ ಅವರು ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು ಸೂಡಾ ನೂತನ ಅಧ್ಯಕ್ಷ ಮಧುಸೂದನ್ ಅವರಿಗೆ ಶುಭ ಹಾರೈಸಿ, ಅವರ ನಾಯಕತ್ವದಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ಅವಳಿ ನಗರಗಳು ಮೂಲಸೌಕರ್ಯ, ಸುಸಂಘಟಿತ ನಗರ ಯೋಜನೆ ಹಾಗೂ ಸಮಗ್ರ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೇರಲಿ ಎಂದು ಆಶಿಸಿದರು.

ಮಧುಸೂದನ್ ಅವರು ಸಚಿವರನ್ನು ಸನ್ಮಾನಿಸಲು ಮುಂದಾದಾಗ, “ನೀವೆಲ್ಲ ಯುವಕರು, ರಾಜಕೀಯದಲ್ಲಿ ಇನ್ನಷ್ಟು ಬೆಳೆಯಬೇಕು. ಈ ಸನ್ಮಾನ ನನಗಲ್ಲ, ನಿಮಗೆ ಸಲ್ಲಬೇಕು” ಎಂದು ಪ್ರೀತಿಯಿಂದ ಹೇಳಿದ ಸಚಿವರು, ಮಧುಸೂದನ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಯುವ ನಾಯಕತ್ವಕ್ಕೆ ಪ್ರೋತ್ಸಾಹ ನೀಡುವಲ್ಲಿ ತಾವು ಸದಾ ಮುಂದೆ ಎಂಬುದನ್ನು ಪ್ರಚುರಪಡಿಸಿದರು.

2002ರಲ್ಲಿ ಎನ್‌ಎಸ್‌ಯುಐ ಸಂಘಟನೆಯ ಮೂಲಕ ರಾಜಕೀಯದಲ್ಲಿ ಸಕ್ರಿಯರಾದ ಸಿ.ಜಿ. ಮಧುಸೂದನ್ ಅವರು, 2010ರಲ್ಲಿ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಸೂಡಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಅವರ ರಾಜಕೀಯ ಪಯಣದ ಮಹತ್ವದ ಘಟ್ಟವಾಗಿದೆ.

ಬಳಿಕ ಮಧುಸೂದನ್ ಹಾಗೂ ಶಿವಮೊಗ್ಗದಿಂದ ಆಗಮಿಸಿದ್ದ ಮುಖಂಡರೊಂದಿಗೆ ಉಪಾಹಾರ ಸೇವಿಸುತ್ತಾ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಯುವ ನಾಯಕರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

“ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎಷ್ಟು ಗಟ್ಟಿಯಾಗಿ ಕಟ್ಟಿಬೆಳೆಸುತ್ತೀರೋ, ಅಷ್ಟು ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ. ರಾಹುಲ್ ಗಾಂಧಿ ಅವರ ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧದ ಹೋರಾಟಕ್ಕೆ ಯುವಕರು ಶಕ್ತಿ ತುಂಬಬೇಕು. ಯುವಕರ ಕೈಗೆ ಅಧಿಕಾರ ನೀಡಬೇಕು ಎಂಬುದು ರಾಹುಲ್ ಗಾಂಧಿ ಅವರ ಆಶಯ. ಆ ಆಶಯಕ್ಕೆ ತಕ್ಕಂತೆ ಯುವ ನಾಯಕರು ನಡೆದುಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ  ಹರ್ಷಿತ್ ಗೌಡ, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಯುವ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ