LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರಿಗೆ ಪ್ರಮೊಷನ್ ಬೇಕಾದರೆ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ: ಡೆಡ್ ಲೈನ್ ನೀಡಿ ಖಡಕ್ ಆದೇಶ ಹೊರಡಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಸರ್ಕಾರಿ ನೌಕರರು ಪ್ರಮೋಷನ್ ಅಥವಾ ಬಡ್ತಿ ಪಡೆಯಬೇಕಾದರೆ ತಮ್ಮ ಸಮಗ್ರ ಆಸ್ತಿ ವಿವರಗಳನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿದೆ ಎಂದು ಸಿಎಂ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ.

ನೌಕರರು ತಮ್ಮ ಚರ-ಸ್ಥಿರ ಆಸ್ತಿ, ಉಳಿತಾಯ ಹಾಗೂ ಸಾಲದ ಮಾಹಿತಿಯನ್ನು ಅಕ್ಟೋಬರ್ 31 ರೊಳಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಗಡುವಿನೊಳಗೆ ಆಸ್ತಿ ವಿವರ ಸಲ್ಲಿಸುವ ನೌಕರರ ಹೆಸರುಗಳನ್ನು ಮಾತ್ರ ಮುಂದಿನ ಬಡ್ತಿ ಪರಿಗಣನಾ ಪಟ್ಟಿಗೆ ಸೇರಿಸಲಾಗುತ್ತದೆ. ಮಾಹಿತಿ ನೀಡದವರಿಗೆ ಬಡ್ತಿ ಭಾಗ್ಯ ಇರುವುದಿಲ್ಲ. ಕೇವಲ ಸ್ವಂತ ಹೆಸರಿನಲ್ಲಿರುವ ಆಸ್ತಿ ಮಾತ್ರವಲ್ಲದೆ, ಬೇರೆಯವರ ಹೆಸರಿನಲ್ಲಿ (ಬೆನಾಮಿ ಅಥವಾ ಕುಟುಂಬ ಸದಸ್ಯರ ಹೆಸರಿನಲ್ಲಿ) ಖರೀದಿಸಿರುವ ಆಸ್ತಿ ವಿವರಗಳನ್ನೂ ನಮೂದಿಸಬೇಕು. ಜೊತೆಗೆ ಆ ವ್ಯಕ್ತಿಯೊಂದಿಗಿನ ಸಂಬಂಧವನ್ನೂ ಸ್ಪಷ್ಟವಾಗಿ ನಮೂದಿಸಬೇಕು ಎಂದು ತಿಳಿಸಲಾಗಿದೆ.

ಅಕ್ಟೋಬರ್ 31 ರೊಳಗೆ ಮಾಹಿತಿ ನೀಡಲು ವಿಫಲರಾಗುವ ನೌಕರರನ್ನು ‘ಸರ್ಕಾರಿ ನೌಕರರ ನಡವಳಿಕೆ ನಿಯಮಾವಳಿ’ಯನ್ನು ಉಲ್ಲಂಘಿಸಿದವರು ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ನೌಕರರು ಸರ್ಕಾರದ ಅಧಿಕೃತ ಪೋರ್ಟಲ್ ಆದ IFHRMS (Integrated Financial and Human Resources Management System – ಸಮಗ್ರ ಹಣಕಾಸು ಮತ್ತು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ) ವೆಬ್‌ಸೈಟ್‌ಗೆ ಲಾಗಿನ್ ಆಗಿ ಈ ವಿವರಗಳನ್ನು ಸಲ್ಲಿಸಬೇಕು.

ಸಲ್ಲಿಸಬೇಕಾದ ವಿವರಗಳು:

ಸ್ಥಿರ ಆಸ್ತಿಗಳು (ಸೈಟು, ಮನೆ, ಕೃಷಿ ಜಮೀನು ಇತ್ಯಾದಿ)

ಚರ ಆಸ್ತಿಗಳು (ಚಿನ್ನ, ವಾಹನಗಳು ಇತ್ಯಾದಿ)

ಬ್ಯಾಂಕ್ ಉಳಿತಾಯ ಮತ್ತು ಠೇವಣಿಗಳು

ನೌಕರರು ಹೊಂದಿರುವ ಸಾಲಗಳು ಮತ್ತು ಹೊಣೆಗಾರಿಕೆಗಳು

ಮುಖ್ಯ ಕಾರ್ಯದರ್ಶಿ ಸಾಯಿಕುಮಾರ್ ಹೊರಡಿಸಿರುವ ಈ ಸುತ್ತೋಲೆಯು ನೌಕರರ ಆದಾಯ ಮೀರಿ ಆಸ್ತಿ ಗಳಿಕೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಕೇಂದ್ರ ಲೋಕಸೇವಾ ಆಯೋಗದ ಅಧಿಕಾರಿಗಳಿಗೆ ವಾರ್ಷಿಕ ಆಸ್ತಿ ವಿವರ ಸಲ್ಲಿಕೆ ಕಡ್ಡಾಯವಾಗಿರುವಂತೆಯೇ, ಈಗ ರಾಜ್ಯ ಮಟ್ಟದ ಎಲ್ಲಾ ನೌಕರರಿಗೂ ಇದನ್ನು ಬಡ್ತಿಯೊಂದಿಗೆ ನೇರವಾಗಿ ಲಿಂಕ್ ಮಾಡಲಾಗಿದೆ.

ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ: ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿ ಆದೇಶ ಹೊರಡಿಸಿದೆ.

ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಮತ್ತು ಯೋಗೇಶ್ ಗೌಡ ಸಹೋದರ ಗುರುನಾಥ್ ಗೌಡ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರಿದ್ದ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿದೆ.

ಸಿಬಿಐ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ಶಿಕ್ಷೆಗೆ ತಡೆಯಾಜ್ಞೆ ನೀಡುವುದು ಅಪರೂಪದ ಸಂದರ್ಭಗಳಲ್ಲಿ ಮಾತ್ರ ಆಗಬೇಕು ಎಂದು ವಾದಿಸಿದರು. ಈ ಸಂಬಂಧ ಸುಪ್ರೀಂ ಕೋರ್ಟ್‌ನ ಮೂರು ತೀರ್ಪುಗಳನ್ನು ಉಲ್ಲೇಖಿಸಿದರು. ಸಾರ್ವಜನಿಕ ಸೇವಕರಾಗಿರುವ ವ್ಯಕ್ತಿಗಳಿಗೆ ಸಹಜವಾಗಿ ಶಿಕ್ಷೆಗೆ ತಡೆಯಾಜ್ಞೆ ನೀಡಬಾರದು ಎಂಬ ವಾದವನ್ನೂ ಮಂಡಿಸಿದರು.

ಈ ಹಿಂದೆ ಸಾಕ್ಷ್ಯ ನಾಶಪಡಿಸಿದ ಆರೋಪದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು ಎಂದು ಸಿಬಿಐ ನ್ಯಾಯಾಲಯದ ಗಮನಕ್ಕೆ ತಂದಿತು. ಅಲ್ಲದೆ, ಹಿಂದಿನ ಎರಡು ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಹೈಕೋರ್ಟ್ ಮುಂದೆ ಬಹಿರಂಗಪಡಿಸಿಲ್ಲ ಎಂದೂ ಸಿಬಿಐ ವಾದಿಸಿತು.

ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಎರಡು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಯಾರೂ ಓಡಿಹೋಗುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ ಆದೇಶಗಳನ್ನೂ ಪ್ರಶ್ನಿಸಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಹೀಗಾಗಿ ದಸರಾ ಹಬ್ಬದ ಬಳಿಕ ಎಲ್ಲ ಅರ್ಜಿಗಳ ವಿಚಾರಣೆಯನ್ನು ಒಟ್ಟಿಗೆ ನಡೆಸಬಹುದು ಎಂದು ವಿನಯ್ ಕುಲಕರ್ಣಿ ಪರ ವಕೀಲರು ಮನವಿ ಮಾಡಿದರು.

ಸಿಬಿಐ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್, ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿತು. ಅಂದು ವಿಚಾರಣೆಯನ್ನು ಮುಂದೂಡುವುದಿಲ್ಲ ಎಂದೂ ಪೀಠ ಸ್ಪಷ್ಟಪಡಿಸಿತು.

2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ಯೋಗೀಶ್ ಗೌಡ ಕುಟುಂಬದವರ ಮನವಿಯ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ, ವಿನಯ್ ಕುಲಕರ್ಣಿ ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್‌ನಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ಘೋಷಿಸಿತ್ತು. ಬಳಿಕ ವಿನಯ್ ಕುಲಕರ್ಣಿ ಸೇರಿದಂತೆ ಹಲವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಆರೋಪಿಗಳು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. 2026ರ ಜುಲೈ 31ರಂದು ಹೈಕೋರ್ಟ್ ವಿನಯ್ ಕುಲಕರ್ಣಿ ಸೇರಿದಂತೆ ಹಲವು ಆರೋಪಿಗಳಿಗೆ ಮೇಲ್ಮನವಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೆ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಈ ಆದೇಶದ ವಿರುದ್ಧ ಸಿಬಿಐ ಮತ್ತು ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!