LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಡಿತರ ಚೀಟಿ ಇ-ಕೆವೈಸಿಗಾಗಿ 'ಅನ್ನ ಸೇವಾ' ಮೊಬೈಲ್ ಆ್ಯಪ್ ಲೋಕಾರ್ಪಣೆ: ರಾಜ್ಯಾದ್ಯಂತ ಅಧಿಕೃತವಾಗಿ ಜಾರಿಗೆ ತಂದ ಕರ್ನಾಟಕ ಸರ್ಕಾರ!

ಅನ್ನ ಭಾಗ್ಯ ಮತ್ತು ಇತರೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಫಲಾನುಭವಿಗಳು ತಮ್ಮ ಮೊಬೈಲ್ ಫೋನ್‌ಗಳ ಮೂಲಕವೇ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅನುವು ಮಾಡಿಕೊಡುವ 'ಅನ್ನ ಸೇವಾ' ಮೊಬೈಲ್ ಆ್ಯಪ್ ಸೇವೆ ಶನಿವಾರದಿಂದ (ಅಕ್ಟೋಬರ್ 10) ರಾಜ್ಯಾದ್ಯಂತ ಲಭ್ಯವಾಗಲಿದೆ.

ಆರಂಭದಲ್ಲಿ ಈ ಯೋಜನೆಯನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಮತ್ತು ಕೊಪ್ಪಳ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಇದೀಗ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಉಳಿದ ಜಿಲ್ಲೆಗಳ ಫಲಾನುಭವಿಗಳಿಗೂ ಈ ಸೇವೆಯನ್ನು ವಿಸ್ತರಿಸಿದ್ದು, ಸಾರ್ವಜನಿಕರು ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಇ-ಕೆವೈಸಿ ಪೂರ್ಣಗೊಳಿಸಬಹುದು ಎಂದು ತಿಳಿಸಿದೆ.

ಅನ್ನ ಸೇವಾ ಆ್ಯಪ್ ರೇಷನ್ ಕಾರ್ಡ್‌ದಾರರು ನ್ಯಾಯಬೆಲೆ ಅಂಗಡಿಗಳಿಗೆ ಅಲೆಯದೆ ಮನೆಯಿಂದಲೇ ಇ-ಕೆವೈಸಿ ಮಾಡಿಕೊಳ್ಳಲು ನೆರವಾಗುವ ಮೊಬೈಲ್ ಆ್ಯಪ್ ಆಗಿದೆ. ಫಲಾನುಭವಿಗಳ ಗುರುತನ್ನು ದೃಢೀಕರಿಸಲು ಈ ಆ್ಯಪ್ ಮುಖ ಗುರುತಿಸುವಿಕೆ (Facial Recognition) ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?