LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈ-ಬೆಂ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಗುಂಡಿಯದ್ದೇ ಕಾರುಬಾರು: ಟ್ರಾಫಿಕ್ ಜಾಮ್, NHAI ವಿರುದ್ಧ ಜನಾಕ್ರೋಶ!

ಮಂಡ್ಯ: ಪ್ರತಿಷ್ಠಿತ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಸರ್ವೀಸ್ ರಸ್ತೆಯ ಅವ್ಯವಸ್ಥೆ ಮತ್ತೊಮ್ಮೆ ಬಯಲಾಗಿದ್ದು, ರಸ್ತೆಗುಂಡಿಯಲ್ಲಿ ಭಾರೀ ವಾಹನವೊಂದು ಸಿಲುಕಿಕೊಂಡ ಪರಿಣಾಮ ವಾಹನ ಸವಾರರು ಗಂಟೆಗಟ್ಟಲೆ ಪರದಾಡಿದ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ನಡೆದಿದೆ.

ಘಟನೆಯ ವಿವರ:

ತೂಬಿನಕೆರೆ ಸಮೀಪದ ಸರ್ವೀಸ್ ರಸ್ತೆಯಲ್ಲಿ ಬಿದ್ದಿದ್ದ ಆಳವಾದ ಗುಂಡಿಯಲ್ಲಿ ಸರಕು ತುಂಬಿದ ಲಾರಿಯೊಂದು ಸಿಲುಕಿಕೊಂಡಿದೆ. ಗುಂಡಿಯಿಂದ ವಾಹನವನ್ನು ಹೊರತೆಗೆಯಲು ಸಾಧ್ಯವಾಗದೆ ರಸ್ತೆಯ ಮಧ್ಯದಲ್ಲೇ ನಿಂತಿದ್ದರಿಂದ, ಮಂಡ್ಯ ಕಡೆಗೆ ಸಂಚರಿಸುತ್ತಿದ್ದ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಆಫೀಸ್, ಆಸ್ಪತ್ರೆ ಹಾಗೂ ತುರ್ತು ಕೆಲಸಗಳಿಗೆ ತೆರಳುತ್ತಿದ್ದ ಸವಾರರು ರಸ್ತೆಯಲ್ಲಿ ಮುಂದೆ ಸಾಗಲಾಗದೆ ತೀವ್ರ ಹೈರಾಣಾದರು.

NHAI ದಿವ್ಯ ನಿರ್ಲಕ್ಷ್ಯಕ್ಕೆ ಸವಾರರ ಹಿಡಿಶಾಪ:

ತೂಬಿನಕೆರೆ ಬಳಿಯ ಸರ್ವೀಸ್ ರಸ್ತೆಯಲ್ಲಿ ಅಪಾಯಕಾರಿ ಗುಂಡಿಗಳು ಬಿದ್ದಿರುವ ಬಗ್ಗೆ ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. "ಟೋಲ್ ಸಂಗ್ರಹವಾಗುವ ಮುಖ್ಯ ಎಕ್ಸ್‌ಪ್ರೆಸ್‌ವೇಗೆ ಮಾತ್ರ ಆದ್ಯತೆ ನೀಡಿ ನೈಸ್ ರೋಡ್ ನಿರ್ಮಿಸಿರುವ ಪ್ರಾಧಿಕಾರ, ಯಾವುದೇ ಶುಲ್ಕ ಬರುವುದಿಲ್ಲ ಎಂಬ ಕಾರಣಕ್ಕೆ ಸರ್ವೀಸ್ ರಸ್ತೆಯನ್ನು ಸಂಪೂರ್ಣ ಕಡೆಗಣಿಸಿದೆ" ಎಂದು ಸ್ಥಳೀಯರು ಹಾಗೂ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಬಂದ್ ಎಚ್ಚರಿಕೆ:

ಸರ್ವೀಸ್ ರಸ್ತೆಗಳಲ್ಲಿನ ಗುಂಡಿಗಳನ್ನು ತಕ್ಷಣವೇ ಮುಚ್ಚಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡದಿದ್ದರೆ ಮೈಸೂರು-ಬೆಂಗಳೂರು ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯ ಹೋರಾಟಗಾರರು ಹೆದ್ದಾರಿ ಪ್ರಾಧಿಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವರದಿ: ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!