LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

OYO ಹೋಟೆಲ್‌ಗಳಲ್ಲಿ ಯುವತಿಯರ ಸರಣಿ ಸಾವು..! 10 ದಿನಗಳಲ್ಲಿ ಮೂವರು ಬಲಿ

ಹೈದರಾಬಾದ್‌ನಲ್ಲಿ OYO ಹೋಟೆಲ್‌ಗಳ ಸುತ್ತಮುತ್ತ ಆತಂಕಕಾರಿ ಘಟನೆಗಳು ವರದಿಯಾಗುತ್ತಿವೆ. ಕೇವಲ 10 ದಿನಗಳ ಅವಧಿಯಲ್ಲಿ ನಗರದ ವಿವಿಧ ಪ್ರದೇಶಗಳ ಹೋಟೆಲ್‌ಗಳಲ್ಲಿ ಮೂವರು ಯುವತಿಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಸಂಚಲನ ಮೂಡಿಸಿದೆ. ಈ ಘಟನೆಗಳ ಬೆನ್ನಲ್ಲೇ ಹೋಟೆಲ್‌ಗಳಲ್ಲಿ ಅತಿಥಿಗಳ ಗುರುತಿನ ಪರಿಶೀಲನೆ, ಸಿಸಿಟಿವಿ ಮೇಲ್ವಿಚಾರಣೆ ಹಾಗೂ ಭದ್ರತಾ ನಿಯಮಗಳ ಪಾಲನೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಪ್ರಕರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೌದು.   ನಗರದ ವಿವಿಧ ಪ್ರದೇಶಗಳ OYO ಹೋಟೆಲ್‌ಗಳಿಗೆ ತೆರಳಿದ್ದ ಮೂವರು ಯುವತಿಯರು ಕೆಲವೇ ದಿನಗಳ ಅಂತರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ಸಂಚಲನ ಮೂಡಿಸಿದೆ. ಈ ಭಯಾನಕ ಘಟನೆಗಳು ನಗರ ನಿವಾಸಿಗಳು, ವಿಶೇಷವಾಗಿ ಯುವತಿಯರು ಮತ್ತು ಯುವಕರಲ್ಲಿ ಆತಂಕ ಹೆಚ್ಚಿಸಿವೆ.

10 ದಿನಗಳಲ್ಲಿ ಮೂವರ ಸಾವು

ನಗರದಲ್ಲಿ ಸತತವಾಗಿ ಬೆಳಕಿಗೆ ಬರುತ್ತಿರುವ ಈ ಘಟನೆಗಳು ಪೊಲೀಸರನ್ನೂ ಬೆಚ್ಚಿಬೀಳಿಸಿವೆ. ಸೆಪ್ಟೆಂಬರ್ 21ರಂದು, ಮಾದಾಪುರ ವ್ಯಾಪ್ತಿಯ OYO ಹೋಟೆಲ್‌ಗೆ ತೆರಳಿದ್ದ ವಿಶಾಖಪಟ್ಟಣಂ ಮೂಲದ ಶಾರೋನ್ ನಿಖಿತಾ ಎಂಬ ಯುವತಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದರು. ಪ್ರಿಯಕರನೊಂದಿಗೆ ಹೋಟೆಲ್‌ಗೆ ಬಂದಿದ್ದ ಅವರು ಮಧ್ಯರಾತ್ರಿ ಕೊಲೆಯಾಗಿದ್ದಾರೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ 29ರಂದು, ಎಸ್‌ಆರ್ ನಗರ ಪ್ರದೇಶದ OYO ಹೋಟೆಲ್‌ನಲ್ಲಿ ವಿಕಾರಾಬಾದ್ ಮೂಲದ ಬಿ. ಶಿರೀಷಾ ಎಂಬ ಮಹಿಳೆ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರು ಶ್ರೀನಿವಾಸ್ ಎಂಬ ವ್ಯಕ್ತಿಯೊಂದಿಗೆ ಹೋಟೆಲ್‌ಗೆ ಚೆಕ್-ಇನ್ ಆಗಿದ್ದರು. ಆದರೆ ಇಬ್ಬರೂ ‘ಗಣೇಶ್’ ಮತ್ತು ‘ದುರ್ಗಾ’ ಎಂಬ ಹೆಸರಿನ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ OYO ಹೋಟೆಲ್‌ನಲ್ಲಿ ಕೊಠಡಿ ಪಡೆದಿರುವುದು ಹೈದರಾಬಾದ್ ನಗರದ ಭದ್ರತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇನ್ನು ಅಕ್ಟೋಬರ್ 2ರಂದು, ಗಾಂಧಿ ಜಯಂತಿಯಂದೇ ಹನಮಕೊಂಡ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಕೋಮಟಿ ಸೃಜನಾ ಎಂಬ ಯುವತಿ ಮಿಯಾಪುರದ ಹೋಟೆಲ್‌ನಲ್ಲಿ ಮೃತಪಟ್ಟಿದ್ದಾರೆ. ಅವರು ಮೃತಪಟ್ಟ ಹಲವು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೀಗೆ ಕೇವಲ 10 ದಿನಗಳ ಅವಧಿಯಲ್ಲಿ ವಿವಿಧ ಪ್ರದೇಶಗಳಲ್ಲಿ ಮೂವರು ಯುವತಿಯರು ಮೃತಪಟ್ಟಿರುವುದು ಪೊಲೀಸರನ್ನೂ ಆತಂಕಕ್ಕೀಡು ಮಾಡಿದೆ.

OYO ಹೋಟೆಲ್‌ಗಳಲ್ಲಿ ಭದ್ರತೆ ಪ್ರಶ್ನೆ

ನಿಯಮಗಳ ಪ್ರಕಾರ ಹೋಟೆಲ್‌ಗೆ ಬರುವ ಪ್ರತಿಯೊಬ್ಬ ಅತಿಥಿಯ ವಿವರಗಳನ್ನು ಸಮರ್ಪಕವಾಗಿ ದಾಖಲಿಸಬೇಕು. ಸರ್ಕಾರಿ ಗುರುತಿನ ಚೀಟಿಗಳನ್ನು ಪರಿಶೀಲಿಸಿ, ಪ್ರವೇಶ ನೋಂದಣಿ ಪುಸ್ತಕವನ್ನೂ ನಿರ್ವಹಿಸಬೇಕು.

ಆದರೆ ಹಣದ ಆಸೆಯಿಂದ ಕೆಲವು ಹೋಟೆಲ್‌ಗಳ ಆಡಳಿತ ಮಂಡಳಿಗಳು ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.ಇತ್ತೀಚಿನ ಸರಣಿ ಘಟನೆಗಳ ಹಿನ್ನೆಲೆಯಲ್ಲಿ ಹಲವು ಪ್ರಶ್ನೆಗಳು ಎದುರಾಗಿವೆ.

  • ಹೋಟೆಲ್ ಕೊಠಡಿಗೆ ಪ್ರವೇಶಿಸಿದ ಬಳಿಕ ನಿಜವಾಗಿ ಏನಾಗುತ್ತಿದೆ?

  • ಕೊಠಡಿಗಳಿಗೆ ಯಾರೆಲ್ಲ ಬರುತ್ತಿದ್ದಾರೆ?

  • ಅತಿಥಿಗಳ ಗುರುತಿನ ಪರಿಶೀಲನೆ ಸರಿಯಾಗಿ ನಡೆಯುತ್ತಿದೆಯೇ?

  • OYO ಹೋಟೆಲ್‌ಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳ ನಿರ್ವಹಣೆ ಮತ್ತು ರೆಕಾರ್ಡಿಂಗ್ ಮೇಲೆ ನಿಗಾ ಇದೆಯೇ?

  • ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ಹೋಟೆಲ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆಯೇ?

  • ಬಜೆಟ್ ಹೋಟೆಲ್‌ಗಳು ಮತ್ತು ಲಾಡ್ಜ್‌ಗಳ ಮೇಲೆ ಪೊಲೀಸರು ವಿಶೇಷ ತಪಾಸಣೆ ನಡೆಸುತ್ತಿದ್ದಾರೆಯೇ?

ಎಂಬ ಪ್ರಶ್ನೆಗಳು ಇದೀಗ ಮುನ್ನೆಲೆಗೆ ಬಂದಿವೆ.

ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸಿದ್ಧತೆ

ಸರಣಿ ಘಟನೆಗಳ ಹಿನ್ನೆಲೆಯಲ್ಲಿ ಹೈದರಾಬಾದ್ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. OYO ಹೋಟೆಲ್‌ಗಳ ನಿರ್ವಾಹಕರಿಗೆ ಎಚ್ಚರಿಕೆ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ನಿಯಮಗಳನ್ನು ಪಾಲಿಸದ ಹೋಟೆಲ್‌ಗಳ ಲೈಸೆನ್ಸ್ ರದ್ದುಪಡಿಸುವುದರ ಜೊತೆಗೆ, ಹೋಟೆಲ್ ಮಾಲೀಕರು ಮತ್ತು ನಿರ್ವಾಹಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!