ಒಟ್ಟು 1,600 ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್/ಡಿಎಆರ್) ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಜುಲೈ 22 ಕೊನೆ ದಿನ.
ಒಟ್ಟು ಹುದ್ದೆಯಲ್ಲಿ 1,421 ಮಿಕ್ಕುಳಿದ ವೃಂದ ಹಾಗೂ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 179 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಸೆ.6ರಂದು ಎರಡೂ ವೃಂದಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಋಣಾತ್ಮಕ ಮೌಲಮಾಪನ ಇರುತ್ತದೆ. ಹೆಚ್ಚಿನ ವಿವರಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ ಸೈಟ್ ನೋಡಬಹುದು.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://cetonline.karnataka.gov.in/KEACAR_DAR_2026/Account/Login