LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Rain Alert : ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಕೊಡಗು ಸೇರಿದಂತೆ ಪ್ರಮುಖ 9 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು, ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬೀದರ್, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಇನ್ನೊಂದೆಡೆ, ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಭಾವವಿದ್ದು, ದಿನವಿಡೀ ಬಿಸಿಲಿನ ಝಳ ಹೆಚ್ಚಿರಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಬಿಸಿಲು ಇರಲಿದೆ. ಕರಾವಳಿಯಲ್ಲಿ ಮೀನುಗಾರರಿಗೆ ಯಾವುದೇ ವಿಶೇಷ ಎಚ್ಚರಿಕೆ ನೀಡಲಾಗಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಿಢೀರ್ ಉಂಟಾಗಿರುವ ಈ ಹವಾಮಾನ ವೈಪರೀತ್ಯದಿಂದಾಗಿ ವೈರಲ್ ಸೋಂಕುಗಳು ಹಾಗೂ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ರೋಗನಿರೋಧಕ ಶಕ್ತಿ ಕಾಯ್ದುಕೊಳ್ಳಲು ಕಾಯಿಸಿ ಆರಿಸಿದ ಬಿಸಿ ನೀರನ್ನು ಕುಡಿಯುವುದು, ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ವೈದ್ಯರು ಸೂಚಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್