LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING: ರಾಜ್ಯಾಧ್ಯಂತ 583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ!

ಬೆಂಗಳೂರು: ನಕಲಿ ಔಷಧಿ ಮಾರಾಟ ಜಾಲದ ಬೆನ್ನತ್ತಿದ್ದ ರಾಜ್ಯ ಆರೋಗ್ಯ ಇಲಾಖೆ, ಇದೀಗ ಯಾವುದೇ ಅಧಿಕೃತ ವೈದ್ಯಕೀಯ ಪದವಿ ಹಾಗೂ ನೋಂದಣಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರು ಮತ್ತು ಅನಧಿಕೃತ ಕ್ಲಿನಿಕ್‌ಗಳ ವಿರುದ್ಧ ಕಠಿಣ ಸಮರ ಸಾರಿದೆ.

2024ರಿಂದ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆಯಲ್ಲಿ, ಅಲೋಪಥಿ, ಆಯುರ್ವೇದ, ಹೋಮಿಯೋಪಥಿ ಮತ್ತು ನ್ಯಾಚುರೋಪಥಿ ಹೆಸರಿನಲ್ಲಿ ಕಾನೂನುಬಾಹಿರವಾಗಿ ಚಿಕಿತ್ಸೆ ನೀಡುತ್ತಿದ್ದ 583ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಅಧಿಕಾರಿಗಳು ಪತ್ತೆಹಚ್ಚಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಕಂಪೌಂಡರ್, ನರ್ಸ್‌ಗಳೇ ಇಲ್ಲಿ 'ಡಾಕ್ಟರ್ಸ್'!

ವಿಚಾರಣೆ ವೇಳೆ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದ್ದು, ಪತ್ತೆಯಾದವರಲ್ಲಿ ಹೆಚ್ಚಿನವರು ಈ ಹಿಂದೆ ಆಸ್ಪತ್ರೆಗಳಲ್ಲಿ ಲ್ಯಾಬ್ ಅಸಿಸ್ಟೆಂಟ್‌ಗಳು, ನರ್ಸ್‌ಗಳು, ಕಂಪೌಂಡರ್‌ಗಳು ಹಾಗೂ ಕ್ಲಿನಿಕ್ ಸಹಾಯಕರುಗಳಾಗಿ ಕೆಲಸ ಮಾಡುತ್ತಿದ್ದವರಾಗಿದ್ದಾರೆ. ವೈದ್ಯರ ಕೆಲಸವನ್ನು ನೋಡಿ ಸ್ವಲ್ಪ ಅನುಭವ ಪಡೆದ ನಂತರ, ಸ್ವಂತವಾಗಿ ಅನಧಿಕೃತ ಕ್ಲಿನಿಕ್‌ಗಳನ್ನು ತೆರೆದು ಜನರ ಜೀವದ ಜೊತೆ ಆಟವಾಡುತ್ತಿದ್ದರು.

ವಿಶೇಷವಾಗಿ ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಧಾರವಾಡ ಜಿಲ್ಲೆಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಇನ್ನು ಗಡಿ ಪ್ರದೇಶ ಹಾಗೂ ಬೆಂಗಳೂರಿನಲ್ಲಿ ಕೆಲವರು ಒಂದೇ ಕಡೆ ಇರದೆ, ಮೊಬೈಲ್ ಸಂಖ್ಯೆ ಮತ್ತು ಸ್ಥಳಗಳನ್ನು ಪದೇಪದೆ ಬದಲಾಯಿಸುತ್ತಾ 'ಮೊಬೈಲ್ ಕ್ಲಿನಿಕ್' ಮಾದರಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ.

ಜಿಲ್ಲಾಮಟ್ಟದಲ್ಲಿ ಕಾರ್ಯಪಡೆ ರಚನೆ

ನಕಲಿ ವೈದ್ಯರು ಹಾಗೂ ನಕಲಿ ಔಷಧ ದಂಧೆಯ ನಡುವಿನ ಲಿಂಕ್ ಕತ್ತರಿಸಲು ಆರೋಗ್ಯ, ಪೊಲೀಸ್ ಹಾಗೂ ಔಷಧ ಆಡಳಿತ ಇಲಾಖೆಗಳನ್ನೊಳಗೊಂಡ 'ವಿಶೇಷ ಕಾರ್ಯಪಡೆ'ಗಳನ್ನು ಜಿಲ್ಲಾಮಟ್ಟದಲ್ಲಿ ರಚಿಸಲಾಗಿದೆ. ಈ ತಂಡಗಳು ದಿಢೀರ್ ದಾಳಿ ನಡೆಸಿ ಅನಧಿಕೃತ ಕ್ಲಿನಿಕ್‌ಗಳಿಗೆ ಸೀಲ್ ಹಾಕುತ್ತಿವೆ.

ವಿಶೇಷ ಎಚ್ಚರಿಕೆ: ನಿಯಮ ಮೀರಿದರೆ ಜೈಲು, ಲಕ್ಷಾಂತರ ದಂಡ

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (KPME) ಕಾಯ್ದೆಯಡಿ ಇಲಾಖೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ:

  • ಮೊದಲ ಬಾರಿ ತಪ್ಪು ಎಸಗಿದರೆ: ₹25,000 ವರೆಗೆ ದಂಡ.

  • ಎರಡನೇ ಬಾರಿ ನಿಯಮ ಉಲ್ಲಂಘಿಸಿದರೆ: ₹2.5 ಲಕ್ಷದವರೆಗೆ ದಂಡ ಮತ್ತು 1 ವರ್ಷ ಜೈಲು ಶಿಕ್ಷೆ.

  • ಮೂರನೇ ಬಾರಿಯೂ ಮುಂದುವರಿಸಿದರೆ: ₹5 ಲಕ್ಷದವರೆಗೆ ದಂಡ ಹಾಗೂ 3 ವರ್ಷಗಳ ಕಾಲ ಜೈಲು ಶಿಕ್ಷೆ.

ಸಾರ್ವಜನಿಕರಿಗೆ ಇಲಾಖೆಯ ಮುಖ್ಯ ಮನವಿ

ಸಾರ್ವಜನಿಕರು ಚಿಕಿತ್ಸೆಗೆ ತೆರಳುವ ಮುನ್ನ ವೈದ್ಯರ ಶೈಕ್ಷಣಿಕ ಅರ್ಹತೆ ಮತ್ತು ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು (KMC Registration) ಕಡ್ಡಾಯವಾಗಿ ಪರಿಶೀಲಿಸಬೇಕು. ಯಾವುದೇ ವ್ಯಕ್ತಿ ಅಥವಾ ಕ್ಲಿನಿಕ್ ಮೇಲೆ ಅನುಮಾನ ಬಂದಲ್ಲಿ ತಕ್ಷಣವೇ ಜಿಲ್ಲಾ ಆರೋಗ್ಯಾಧಿಕಾರಿ (DHO) ನೇತೃತ್ವದ ಪ್ರಾಧಿಕಾರಕ್ಕೆ ದೂರು ನೀಡುವಂತೆ ಹಾಗೂ ನಕಲಿ ವೈದ್ಯರ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸುವಂತೆ ಆರೋಗ್ಯ ಇಲಾಖೆ ಕೋರಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!