LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING: ಸಿಐಡಿ ಇನ್ಸ್ ಪೆಕ್ಟರ್ ನಿಂದಲೇ ದರೋಡೆ: ಬರೋಬ್ಬರಿ 20 ಲಕ್ಷ ದೋಚಿ ಪರಾರಿಯಾದ ಗ್ಯಾಂಗ್: ರಕ್ಷಕರೇ ಭಕ್ಷಕರಾದ ಕಥೆ

ಬೆಂಗಳೂರು: ಸಿಐಡಿ ಇನ್ಸ್ ಪೆಕ್ಟರ್ ಓರ್ವರು ಗ್ಯಾಂಗ್ ಕಟ್ಟಿಕೊಂಡು ಬಂದು ಬರೋಬ್ಬರಿ 20 ಲಕ್ಷ ರೂಪಾಯಿ ಹಣ ದೋಚಿ ಎಸ್ಕೇಪ್ ಆಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಈ ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಕಳ್ಳರನ್ನು ಹಿಡಿಯಬೇಕಾದ ಪೊಲೀಸ್ ಅಧಿಕಾರಿಯೇ ಗ್ಯಾಂಗ್ ಕಟ್ಟಿಕೊಂಡು ದರೋಡೆ ಮಾಡಿರುವುದು ಆತಂಕಕಾರಿ ಬೆಳವಣಿಗೆ.

ಕೇರಳ ಮೂಲದ ಉದ್ಯಮಿಗಳು ವ್ಯಾಪಾರದ ಉದ್ದೇಶಕ್ಕಾಗಿ ಹಣದ ಸಮೇತ ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಎಂಬ ನಾಲ್ವರೊಂದಿಗೆ ಸೇರಿ ದರೋಡೆಗೆ ಪ್ಲಾನ್ ಮಾಡಿದ್ದಾರೆ.

ಪ್ಲಾನ್ ನಂತೆ ಹೋಟೆಲ್ ಮುಂಭಾಗ ಅಧಿಕೃತ ಸಿಐಡಿ ಪೊಲೀಸ್ ಜೀಪ್ ನಿಲ್ಲಿಸಿ ಇನ್ಸ್‌ಪೆಕ್ಟರ್ ಒಳಗೇ ಕುಳಿತಿದ್ದರು. ಅವರ ಗ್ಯಾಂಗ್‌ನ ಇಬ್ಬರು ಹೋಟೆಲ್ ಕೋಣೆಗೆ ನುಗ್ಗಿ, ತಾವು ಪೊಲೀಸರೆಂದು ಇನ್ಸ್‌ಪೆಕ್ಟರ್ ಅವರ ಅಧಿಕೃತ ಗುರುತಿನ ಚೀಟಿ ತೋರಿಸಿ, ಅಕ್ರಮವಾಗಿ ಟ್ರೇಡಿಂಗ್ ಮಾಡಲು ಹಣ ತಂದಿದ್ದೀರಿ ಎಂದು ಉದ್ಯಮಿಗಳನ್ನು ಬೆದರಿಸಿದ್ದಾರೆ. ಬಳಿಕ ಅವರಿಂದ 20 ಲಕ್ಷ ರೂಪಾಯಿ ನಗದನ್ನು ಕಸಿದುಕೊಂಡು, ಕಾಲ್ಕಿತ್ತುದ್ದು, ಹೋಟೆಲ್ ಹೊರಗೆ ನಿಂತಿದ್ದ ಪೊಲೀಸ್ ಜೀಪ್‌ನಲ್ಲೇ ಇಡೀ ಗ್ಯಾಂಗ್ ಎಸ್ಕೇಪ್ ಆಗಿದೆ.

ಉದ್ಯಮಿಗಳು ತಕ್ಷಣವೇ ಅವರು ಮಡಿವಾಳ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣದ ಗಾಂಭೀರ್ಯತೆ ಅರಿತು ತನಿಖೆಗೆ ಇಳಿದ ಮಡಿವಾಳ ಪೊಲೀಸರು, ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ದರೋಡೆ ಗ್ಯಾಂಗ್‌ನಲ್ಲಿದ್ದ ಕುಪೇಂದ್ರ ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯ ವಿಚಾರಣೆ ನಡೆಸಿದಾಗ ಇಡೀ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಎಂಬ ಆಘಾತಕಾರಿ ಸತ್ಯ ಬಯಲಾಗಿದೆ. ಕುಪೇಂದ್ರ ಬಂಧನವಾಗುತ್ತಿದ್ದಂತೆಯೇ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಹಾಗೂ ಉಳಿದ ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ.

ಸದ್ಯ ಪೊಲೀಸರು ಆರೋಪಿ ಕುಪೇಂದ್ರ ಮತ್ತು ದರೋಡೆಗೆ ಬಳಸಲಾಗಿದ್ದ ಸಿಐಡಿ ಜೀಪನ್ನು ಜಪ್ತಿ ಮಾಡಿದ್ದು, ತಲೆಮರೆಸಿಕೊಂಡಿರುವ ಇತರ ಪೊಲೀಸ್ ಅಧಿಕಾರಿ ಹಾಗೂ ಇತರ ನಾಲ್ವರಿಗಾಗಿ ಹುಡುಕಾಟ ನಡೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!