LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING: ಉತ್ತರ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ; 9 ಮಂದಿ ಸಜೀವ ದಹನ, ಭಯಾನಕ ವೀಡಿಯೋ ವೈರಲ್ |WATCH VIDEO

ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಬಸ್‌ಗೆ ಭೀಕರ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆ ಸೇರಿದಂತೆ 9 ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ನೋಯ್ಡಾದಿಂದ ಮಹೋಬಾಗೆ ತೆರಳುತ್ತಿದ್ದ ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬೆಂಕಿ ಕಾಣಿಸಿಕೊಂಡ ಕೂಡಲೇ ಕೆಲವರು ಬಸ್‌ನ ಕಿಟಕಿ ಗಾಜುಗಳನ್ನು ಒಡೆದು ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ತಡರಾತ್ರಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು ಮಹಿಳೆ ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ದೆಹಲಿಯಿಂದ ಮಹೋಬಾಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 30-35 ಪ್ರಯಾಣಿಕರಿದ್ದರು. ಬೆಂಕಿ ಕಾಣಿಸಿಕೊಂಡ ಬಳಿಕ ಕೆಲವರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ರಾತ್ರಿ ಸುಮಾರು 11.30ರ ವೇಳೆಗೆ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಎಡಿಎಂ ಅಜಿತ್ ಸಿಂಗ್ ಪ್ರಕಾರ, ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಪವನ್ ಮತ್ತು ಕಂಡಕ್ಟರ್ ಯೋಗೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸ್ ಮಾಲೀಕ ಮಧ್ಯಪ್ರದೇಶದವರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿದ ಚಾಲಕ?

ಬಸ್ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಹಲವು ಗಂಭೀರ ಆರೋಪಗಳು ಉಲ್ಲೇಖವಾಗಿವೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸುನೇಲ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ.

ರಾತ್ರಿ ಸುಮಾರು 11.30ಕ್ಕೆ ನೋಯ್ಡಾ-ಆಗ್ರಾ ಮಾರ್ಗದ 33ನೇ ಕಿಲೋಮೀಟರ್ ಬಳಿ ಬಸ್ ತಲುಪಿದಾಗ ಚಾಲಕನ ಕ್ಯಾಬಿನ್‌ನಿಂದ ಸುಟ್ಟ ವಾಸನೆ ಬರುತ್ತಿರುವುದನ್ನು ಪ್ರಯಾಣಿಕರು ಗಮನಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಪ್ರಯಾಣಿಕರು ಈ ಬಗ್ಗೆ ಚಾಲಕ ಮತ್ತು ಕಂಡಕ್ಟರ್‌ಗೆ ಮಾಹಿತಿ ನೀಡಿದರೂ, ಬಸ್‌ನಲ್ಲಿ ಇಂತಹ ವಾಸನೆ ಸಾಮಾನ್ಯ ಎಂದು ಚಾಲಕ ಹೇಳಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಸಮಸ್ಯೆ ಪರಿಶೀಲಿಸಲು ಚಾಲಕ ತಕ್ಷಣ ಬಸ್ ನಿಲ್ಲಿಸಿರಲಿಲ್ಲ ಮತ್ತು ಚಾಲಕ ಹಾಗೂ ಕಂಡಕ್ಟರ್ ಕ್ಯಾಬಿನ್‌ನಲ್ಲೇ ಬೀಡಿ/ಸಿಗರೇಟ್ ಸೇದುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಇದಾದ ಕೆಲವೇ ಕ್ಷಣಗಳಲ್ಲಿ ಚಾಲಕನ ಸೀಟಿನ ಬಳಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಬಸ್ ನಿಲ್ಲಿಸುವಂತೆ ಕೂಗಿಕೊಂಡರೂ ಆರಂಭದಲ್ಲಿ ಚಾಲಕ ಮತ್ತು ಕಂಡಕ್ಟರ್ ಬಸ್ ನಿಲ್ಲಿಸಲು ನಿರಾಕರಿಸಿ ಬೆದರಿಕೆ ಹಾಕಿದ್ದರು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಆ ವೇಳೆಗೆ ಬೆಂಕಿ ವೇಗವಾಗಿ ಬಸ್‌ನಾದ್ಯಂತ ಹರಡಿದ್ದು, ದಟ್ಟ ಹೊಗೆ ಪ್ರಯಾಣಿಕರ ವಿಭಾಗವನ್ನು ಆವರಿಸಿತ್ತು. ಬೆಂಕಿ ಕಾಣಿಸಿಕೊಂಡ ಬಳಿಕ ಚಾಲಕ ಮತ್ತು ಕಂಡಕ್ಟರ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಫೈರ್ ಎಕ್ಸ್‌ಟಿಂಗ್ವಿಷರ್‌ನಿಂದ ಕಿಟಕಿ ಒಡೆದು ರಕ್ಷಣೆ

ಬಸ್‌ನಲ್ಲಿದ್ದ ಅಗ್ನಿಶಾಮಕ ಉಪಕರಣ ಬಳಸಿ ಬೆಂಕಿ ನಂದಿಸಲು ಪ್ರಯತ್ನಿಸಲಾಯಿತಾದರೂ ಅದು ಕಾರ್ಯನಿರ್ವಹಿಸಲಿಲ್ಲ ಎಂದು ವರದಿಯಾಗಿದೆ. ಬಸ್ ಒಳಗಿನಿಂದ ಪ್ರಯಾಣಿಕರ ಧ್ವನಿ ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದವರು ಫೈರ್ ಎಕ್ಸ್‌ಟಿಂಗ್ವಿಷರ್ ಬಳಸಿ ಕಿಟಕಿಯ ಗಾಜು ಒಡೆದು ಒಳಗಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ.

‘ಹೊರಗೆ ಬರಲು ಸರಿಯಾದ ದಾರಿ ಇರಲಿಲ್ಲ’

ಅಗ್ನಿ ಅವಘಡದಿಂದ ಪಾರಾದ ಪ್ರಯಾಣಿಕರೊಬ್ಬರು, ತಾವು ನಿದ್ರಿಸುತ್ತಿದ್ದಾಗ ಯಾರೋ ಎಬ್ಬಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವುದಾಗಿ ತಿಳಿಸಿದರು ಎಂದು ಹೇಳಿದ್ದಾರೆ.

“ಹೊರಗೆ ಬರಲು ಸರಿಯಾದ ದಾರಿ ಇರಲಿಲ್ಲ. ಬಸ್ ತುಂಬಾ ಹೊಗೆಯಿಂದ ಆವೃತವಾಗಿತ್ತು. ಹೇಗೋ ಆತಂಕದ ನಡುವೆ ಹೊರಗೆ ಬಂದೆವು” ಎಂದು ಅವರು ತಿಳಿಸಿದ್ದಾರೆ.

ಮತ್ತೊಬ್ಬ ಪ್ರಯಾಣಿಕರಾದ ರಿಂಕಿ ರಜಪೂತ್, ತಾವು ನೊಯ್ಡಾದಿಂದ ರಾಥ್‌ಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಬೆಂಕಿ ಕಾಣಿಸಿಕೊಂಡಾಗ ತಾವು ನಿದ್ರಿಸುತ್ತಿದ್ದು, ಯಾರೋ ಬಾಗಿಲು ಬಡಿದು ಎಚ್ಚರಿಸಿದರು ಎಂದು ತಿಳಿಸಿದ್ದಾರೆ.

“ನಾನು ಯಾವುದೇ ವಸ್ತುಗಳನ್ನು ತೆಗೆದುಕೊಳ್ಳಲಿಲ್ಲ. ಚಪ್ಪಲಿಯನ್ನೂ ಹಾಕಿಕೊಳ್ಳಲಿಲ್ಲ. ಫೋನ್ ಮಾತ್ರ ತೆಗೆದುಕೊಂಡು ಹೊರಗೆ ಬಂದೆ” ಎಂದು ರಿಂಕಿ ಹೇಳಿದ್ದಾರೆ.

ಬಸ್‌ನೊಳಗೆ ಭಾರೀ ಗೊಂದಲ ಉಂಟಾಗಿತ್ತು. ಪ್ರಯಾಣಿಕರು ಒಬ್ಬರನ್ನೊಬ್ಬರು ತಳ್ಳಿಕೊಂಡು ಹೊರಬರಲು ಪ್ರಯತ್ನಿಸುತ್ತಿದ್ದರು. ದಟ್ಟ ಹೊಗೆಯಿಂದ ಏನೂ ಕಾಣಿಸುತ್ತಿರಲಿಲ್ಲ ಮತ್ತು ಉಸಿರಾಡಲೂ ಕಷ್ಟವಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

ಚಾಲಕನ ಸೀಟ್ ಬಳಿ ಬೆಂಕಿ ಕಾಣಿಸಿಕೊಂಡಿತ್ತು

ಬೆಂಕಿ ಬಸ್‌ನ ಮುಂಭಾಗದಲ್ಲಿ, ಚಾಲಕ ಕುಳಿತುಕೊಳ್ಳುವ ಸ್ಥಳದ ಸಮೀಪದಿಂದ ಆರಂಭವಾಗಿರುವಂತೆ ಕಂಡುಬಂದಿತು ಎಂದು ರಿಂಕಿ ಹೇಳಿದ್ದಾರೆ.

ಅಗ್ನಿ ಅವಘಡದ ವೇಳೆ ಕೆಲವೇ ಮಂದಿ ಹೊರಬರಲು ಸಾಧ್ಯವಾಗಿದ್ದು, ತಮ್ಮ ಹಿಂದೆ ಇದ್ದ ಹಲವು ಪ್ರಯಾಣಿಕರು ಹೊರಬರಲು ಸಾಧ್ಯವಾಗದೇ ಇರಬಹುದು ಎಂದು ಅವರು ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳೊಂದಿಗೆ ಯೋಗಿ ಆದಿತ್ಯನಾಥ್ ಮಾತುಕತೆ

ಗ್ರೇಟರ್ ನೋಯ್ಡಾದಲ್ಲಿ ನಡೆದ ರಸ್ತೆ ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದುಕೊಂಡಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿ ಪ್ರಕಾರ, ಯೋಗಿ ಆದಿತ್ಯನಾಥ್ ಸಂತ್ರಸ್ತರ ಕುಟುಂಬಗಳೊಂದಿಗೆ ಮಾತನಾಡಿದ್ದು, ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!