LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮನಗರದಲ್ಲಿ SIR ಪ್ರಕ್ರಿಯೆಯಲ್ಲಿ BLOಗಳಿಂದ ಕರ್ತವ್ಯ ಲೋಪ: ಮನೆ ಮನೆಗೆ ತೆರಳಿ ಪರಿಶೀಲಿಸುವ ಬದಲು ಸಮುದಾಯ ಭವನದಲ್ಲಿ ಜನರನ್ನು ಕೂರಿಸಿ ಗಣತಿ: ಹೆಚ್.ಡಿ.ಕೆ ಆರೋಪ

ರಾಮನಗರ: ರಾಜ್ಯಾದ್ಯಂತ ಮತ ಪಟ್ಟಿ ಪರಿಷ್ಕರಣೆ ಕಾರ್ಯ (ಎಸ್ ಐಆರ್) ಆರಂಭವಾಗಿದೆ. ಮತದಾರರು ಸ್ವಯಂಪ್ರೇರಿತರಾಗಿ ಈ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ ರಾಮನಗರದಲ್ಲಿ ಬಿಎಲ್‌ಒಗಳು ಕರ್ತವ್ಯ ಲೋಪವೆಸಗುತ್ತಿದ್ದು, ಮನೆ ಮನೆಗೆ ತೆರಳಿ ಪರಿಶೀಲಿಸುವ ಬದಲು ಸಮುದಾಯ ಭವನದಲ್ಲಿ ಕುಳಿತು ಜನರನ್ನು ಕರೆಸಿ ಗಣತಿ ನಮೂನೆ ವಿತರಿಸುತ್ತಿದ್ದಾರೆ ಬೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಆರೋಪಿಸಿದ್ದು, ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪಗಳು ಕಂಡುಬಂದಿವೆ. ಬಿಎಲ್​ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ನಿಖಿಲ್ ಕುಮಾಅರಸ್ವಾಮಿ ಹೇಳಿಕೆ ಬೆನ್ನಲ್ಲೆ ಇನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್‌ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ನಮ್ಮನ್ನ ಹೊರಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!