LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳು ನಟ ವಿಜಯ್-ಸಂಗೀತಾ ವಿಚ್ಛೇದನ ಕೇಸ್: ವಿಚಾರಣೆ ಜೂನ್ 15ಕ್ಕೆ ವಿಚಾರಣೆ ಮುಂದೂಡಿಕೆ

ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ತಮಿಖು ನಟ ದಳಪತಿ ವಿಜಯ್ ಹಾಗೂ ಪತ್ನಿ ಸಂಗೀತಾ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ವಿಚಾರಣೆಯನ್ನು ಎರಡನೇ ಬಾರಿಗೆ ಮುಂದೂಡಿದೆ.

ವಿಜಯ್ ಮತ್ತು ಸಂಗೀತಾ ಅವರ ವಿಚ್ಛೇದನ ಪ್ರಕರಣದ ವಿಚಾರಣೆ ಇಂದು ನ್ಯಾಯಾಧೀಶರಾದ ಶಶಿಕಲಾ ಅವರ ಮುಂದೆ ಬಂದಿತ್ತು. ಅಲ್ಪ ಸಮಯದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಕರಣವನ್ನು ಜೂನ್ 15ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಫೆಬ್ರವರಿ 26ರಂದು ಸಂಗೀತಾ ಅವರು ವಿಚ್ಛೇದನ ಕೋರಿ ಮೊದಲ ಬಾರಿ ಅರ್ಜಿ ಸಲ್ಲಿಸಿದ್ದರು. ಆನಂತರ ಪ್ರಕರಣವನ್ನು ಏಪ್ರಿಲ್ 20ಕ್ಕೆ ನಿಗದಿಪಡಿಸಲಾಗಿತ್ತು. ಈಗ ಎರಡನೇ ಬಾರಿ ಮುಂದೂಡಲ್ಪಟ್ಟಿದೆ.

ಸಂಗೀತಾ ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ನಟ ವಿಜಯ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಜಯ್ ಅವರು ಬೇರೊಬ್ಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಅವರು ದೂರಿದ್ದಾರೆ. 2021ರಲ್ಲಿ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಸಂಬಂಧವಿರುವುದು ನನಗೆ ತಿಳಿಯಿತು. ಈ ನಂಬಿಕೆ ದ್ರೋಹದಿಂದ ನನಗೆ ತೀವ್ರ ಮಾನಸಿಕ ನೋವು ಉಂಟಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. 2021ರಿಂದ ವಿಜಯ್ ತಮ್ಮೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ ಮತ್ತು ಭಾವನಾತ್ಮಕವಾಗಿ ದೂರವಾಗಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ.

ವಿಜಯ್ ಮತ್ತು ಸಂಗೀತಾ 1999ರ ಆಗಸ್ಟ್ ತಿಂಗಳಲ್ಲಿ ವಿವಾಹವಾಗಿದ್ದರು. ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಕಳೆದ 25 ವರ್ಷಗಳಿಂದ ಅನ್ಯೋನ್ಯವಾಗಿದ್ದ ಈ ಜೋಡಿ ಈಗ ಬೇರ್ಪಡುತ್ತಿರುವುದು ಅಭಿಮಾನಿಗಳಿಗೆ ಆಘಾತ ತಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!