ಶಿವಮೊಗ್ಗ: ಹಿರಿಯ ಸಮಾಜವಾದಿ ನಾಯಕ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕರಾದ ಕೋಣಂದೂರು ಲಿಂಗಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಅಸ್ವಸ್ಥರಾಗಿದ್ದು, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ. ತೀರ್ಥಹಳ್ಳಿ ಭಾಗದ ಹಿರಿಯ ರಾಜಕಾರಣಿಯಾಗಿರುವ ಇವರ ಆರೋಗ್ಯದ ಬಗ್ಗೆ ಕ್ಷೇತ್ರದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.