LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡು ರಾಜಕಾರಣದಲ್ಲಿ ಹಿಸ್ಟಾರಿಕ್ ಟ್ವಿಸ್ಟ್: TVK ಮುಖ್ಯಸ್ಥ ನಟ ವಿಜಯ್ ಸರ್ಕಾರ ರಚನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಐತಿಹಾಸಿಕ ಮಹಾ ಮೈತ್ರಿಗೆ ನಾಂದಿ ಹಾಡಲಾಗಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷರಾದ ನಟ ಸಿ. ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದ ಅಧಿಕೃತ ಬೆಂಬಲವನ್ನು ಕೋರಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕಾಂಗ್ರೆಸ್, ವಿಜಯ್ ನೇತೃತ್ವದ ಟಿವಿಎಕ್ ಸರ್ಕಾರಕ್ಕೆ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ.

ತಮಿಳುನಾಡಿನ ಜನತೆ, ವಿಶೇಷವಾಗಿ ಯುವಸಮುದಾಯವು ಸಾಂವಿಧಾನಿಕ ತತ್ವಗಳನ್ನು ನಂಬುವ ಜಾತ್ಯತೀತ, ಪ್ರಗತಿಪರ ಮತ್ತು ಕಲ್ಯಾಣ ಆಧಾರಿತ ಸರ್ಕಾರಕ್ಕಾಗಿ ಸ್ಪಷ್ಟ ಮತ್ತು ಅಗಾಧವಾದ ತೀರ್ಪನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನಾದೇಶವನ್ನು ಗೌರವಿಸಿ ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಟಿವಿಎಕ್ ಜೊತೆ ಕೈಜೋಡಿಸಲು ನಿರ್ಧರಿಸಿದೆ.

ವಿಜಯ್ ಪಕ್ಷಕ್ಕೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

ಸರ್ಕಾರ ರಚನೆಗೆ ಬೆಂಬಲ ನೀಡುವಂತೆ ಟಿವಿಕೆ ಅಧ್ಯಕ್ಷ ಸಿ. ವಿಜಯ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷಕ್ಕೆ ಅಧಿಕೃತವಾಗಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವ ಕಾಂಗ್ರೆಸ್, ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ತನ್ನ ಪೂರ್ಣ ಬೆಂಬಲವನ್ನು ಪ್ರಕಟಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ತಮಿಳುನಾಡಿನ ಜನತೆ, ವಿಶೇಷವಾಗಿ ಯುವಸಮುದಾಯವು ಸಾಂವಿಧಾನಿಕ ತತ್ವಗಳನ್ನು ನಂಬುವ, ಜಾತ್ಯತೀತ, ಪ್ರಗತಿಪರ ಹಾಗೂ ಕಲ್ಯಾಣ ಆಧಾರಿತ ಸರ್ಕಾರಕ್ಕಾಗಿ ಸ್ಪಷ್ಟ ಮತ್ತು ಬಲವಾದ ತೀರ್ಪನ್ನು ನೀಡಿದ್ದಾರೆ. ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಜನತೆ ಸಿ. ವಿಜಯ್ ನೇತೃತ್ವದ ಟಿವಿಕೆ ಪಕ್ಷವನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವು (CLP) ಟಿವಿಕೆಗೆ ಪೂರ್ಣ ಬೆಂಬಲ ನೀಡಲು ನಿರ್ಧರಿಸಿದೆ ಎಂದು ತಿಳಿಸಿದೆ.

ಸ್ಥಳೀಯ ಸಂಸ್ಥೆ, ಲೋಕಸಭೆಗೂ ಮುಂದುವರಿಯಲಿದೆ ಮೈತ್ರಿ

ಕಾಂಗ್ರೆಸ್ ಮತ್ತು ಟಿವಿಕೆ ನಡುವಿನ ಈ ಒಪ್ಪಂದ ಕೇವಲ ಈಗಿನ ಸರ್ಕಾರ ರಚನೆಗೆ ಮಾತ್ರ ಸೀಮಿತವಾಗಿಲ್ಲ. ಮುಂಬರುವ ದಿನಗಳಲ್ಲಿ ತಮಿಳುನಾಡು ರಾಜಕಾರಣವನ್ನು ಸಂಪೂರ್ಣವಾಗಿ ಮರುರೂಪಿಸುವ ದೀರ್ಘಾವಧಿ ಯೋಜನೆಯನ್ನು ಕಾಂಗ್ರೆಸ್ ಹಾಕಿಕೊಂಡಿದೆ.

ಪರಸ್ಪರ ಗೌರವ, ಸೂಕ್ತ ಪಾಲುದಾರಿಕೆ ಮತ್ತು ಜಂಟಿ ಜವಾಬ್ದಾರಿಯ ಆಧಾರದ ಮೇಲೆ ಈ ಮೈತ್ರಿ ಏರ್ಪಟ್ಟಿದೆ. ಇದು ಕೇವಲ ಪ್ರಸ್ತುತ ಸರ್ಕಾರ ರಚನೆಗಾಗಿ ಮಾತ್ರವಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು, ಲೋಕಸಭೆ ಹಾಗೂ ರಾಜ್ಯಸಭಾ ಚುನಾವಣೆಗಳಿಗೂ ಮುಂದುವರಿಯಲಿದೆ” ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ಇಟ್ಟ ಪ್ರಮುಖ ಷರತ್ತು ಏನು?

ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಲು ಕಾಂಗ್ರೆಸ್ ಅತ್ಯಂತ ಕಠಿಣ ಹಾಗೂ ಪ್ರಮುಖ ಷರತ್ತೊಂದನ್ನು ವಿಧಿಸಿದೆ. ಭಾರತದ ಸಂವಿಧಾನವನ್ನು ನಂಬದ ಯಾವುದೇ ಕೋಮು ಶಕ್ತಿಗಳನ್ನು (Communal Forces) ಈ ಮೈತ್ರಿಯಿಂದ ಸಂಪೂರ್ಣವಾಗಿ ದೂರ ಇಡಬೇಕು ಎಂಬುದು ಕಾಂಗ್ರೆಸ್‌ನ ಮುಖ್ಯ ಷರತ್ತಾಗಿದೆ.

ಒಟ್ಟಾರೆಯಾಗಿ, ಡಿಎಂಕೆ ಪಾಳಯದಿಂದ ಕಾಂಗ್ರೆಸ್ ಹೊರಬಂದು, ನಟ ವಿಜಯ್ ಅವರ ಕೈ ಹಿಡಿದಿರುವುದು ತಮಿಳುನಾಡು ರಾಜಕೀಯದಲ್ಲಿ ಹೊಸ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!